​ವಾಹನ ಢಿಕ್ಕಿ: ಅಪರಿಚಿತ ವ್ಯಕ್ತಿ ಮೃತ್ಯು

Update: 2018-04-21 17:04 GMT

ಬೈಂದೂರು, ಎ.21: ನಾಗೂರು ಹನುಮಾನ್ ದೇವಸ್ಥಾನದ ಎದುರುಗಡೆ ಎ.20ರಂದು ರಾತ್ರಿ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ 45-50ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಬೈಂದೂರಿನಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ವ್ಯಕ್ತಿಗೆ ವಾಹನವೊಂದು ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದು, ಇದರಿಂದ ಗಂಭೀರವಾಗಿ ಗಾಯ ಗೊಂಡ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತ ದೇಹವನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿ ಇರಿಸಲಾಗಿದೆ. ಮೃತಪಟ್ಟ ವ್ಯಕ್ತಿ ಗುರುತು ಈವರೆಗೆ ತಿಳಿದುಬಂದಿಲ್ಲ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News