ಗೂಂಡಾ ಕಾಯ್ದೆಯಡಿ ರೌಡಿ ರವಿ ಬಂಧನ

Update: 2018-04-21 17:37 GMT

ಬೆಂಗಳೂರು, ಎ.21: ಹಲವು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪ ಹೊತ್ತಿರುವ ರೌಡಿ ರವಿಕುಮಾರ್‌ನನ್ನು ಗೂಂಡಾ ಕಾಯ್ದೆಯಡಿ ಇಲ್ಲಿನ ವಿಜಯನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಗರದ ಚೇಳೂರು ಪಾಳ್ಯದ ನಿವಾಸಿಯಾದ ರವಿಕುಮಾರ್ ವಿರುದ್ದ ಮಾಗಡಿ ರಸ್ತೆ, ವಿಜಯನಗರ ಮತ್ತು ಉಪ್ಪಾರಪೇಟೆ ಪೊಲೀಸ್ ಠಾಣೆ ಸೇರಿ ಒಟ್ಟು 10 ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.

ಗಂಭೀರ ಪ್ರಕರಣ ಸೇರಿದಂತೆ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಗೂಂಡಾ ಕಾಯ್ದೆಯಡಿ ಅಪರ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ನೇತೃತ್ವದ ತಂಡ ಈತನ ವಿರುದ್ದ ವರದಿಯನ್ನು ತಯಾರು ಮಾಡಿ ಮಂಡಿಸಿದ ಮೇರೆಗೆ ಗೂಂಡಾ ಕಾಯ್ದೆಯಡಿ ಬಂಧನದಲ್ಲಿಡಲು ಬೆಂಗಳೂರು ನಗರದ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News