×
Ad

ಇನ್ನಷ್ಟು ಸಾಧಿಸಲು ಮತ್ತೊಮ್ಮೆ ಅವಕಾಶ ಕೊಡಿ: ವಿನಯಕುಮಾರ್ ಸೊರಕೆ

Update: 2018-04-22 14:19 IST

 ಹಿರಿಯಡ್ಕ, ಎ.21: ಕಾಪು ಕ್ಷೇತ್ರದಲ್ಲಿ ಅಭಿವೃದ್ಧಿಯಲ್ಲ್ಲಿ ಬಹಳ ಸಾಧಿಸಿದರೂ ಇನ್ನಷ್ಟು ಕೆಲಸಗಳು ಆಗಬೇಕಾಗಿದೆ. ಅದಕ್ಕಾಗಿ ಇನ್ನೊಂದು ಅವಕಾಶ ಕೊಟ್ಟರೆ ಮತ್ತೆ ಕಾಪು ಕ್ಷೇತ್ರವನ್ನು ರಾಷ್ಟ್ರ ಮಟ್ಡದಲ್ಲಿ ಗುರುತಿಸುವಂತಹ ಕೆಲಸ ಮಾಡ ಲಾಗುವುದು ಎಂದು ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.

ಹಿರಿಯಡ್ಕ ದೇವಾಡಿಗರ ಸಭಾಭವನದಲ್ಲಿ ಶನಿವಾರ ನಡೆದ ಕಾಪು ಬ್ಲಾಕ್ ಉತ್ತರ ವಲಯ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ಯಾಮಲಾ ಸುಧಾಕರ್, ರಮೇಶ್ ಪ್ರಭು ಮತ್ತು ಪ್ರವೀಣ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಎಐಸಿಸಿ ಸದಸ್ಯ ಅಮೃತ್ ಶೆಣೈ, ಕೆಪಿಸಿಸಿ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ, ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಸುಧೀರ್ ಹೆಗ್ಡೆ, ಶಾಂತಾರಾಮ ಸೂಡ, ವಿನೋದ್ ಕುಮಾರ್, ಮಹಾಬಲ ಕುಂದರ್, ಹರೀಶ್ ಕಿಣಿ, ಶ್ರೀಪಾದ್ ರೈ, ಉದ್ಯಾವರ ನಾಗೇಶ್ ಕುಮಾರ್, ಮೈರ್ಮಾಡಿ ಸುಧಾಕರ ಶೆಟ್ಟಿ, ರಮೇಶ್ ಶೆಟ್ಟಿ, ರಮೇಶ್ ಕುಮಾರ್, ಇಸ್ಮಾಯಿಲ್ ಆತ್ರಾಡಿ, ಲಕ್ಷ್ಮೀನಾರಾಯಣ ಪ್ರಭು, ಚರಣ್, ಸಂಧ್ಯಾ ಶೆಟ್ಟಿ, ಮಾಲತಿ ಆಚಾರ್ಯ, ಚಂದ್ರಿಕಾ ಕೇಳ್ಕರ್, ಅಶೋಕ್ ಶೆಟ್ಟಿ, ಸಂತೋಷ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News