ನೀತಿ ಸಂಹಿತೆ ಉಲ್ಲಂಘನೆ: 2.36 ಕೋಟಿ ರೂ. ನಗದು, ಚಿನ್ನಾಭರಣ ವಶ

Update: 2018-04-22 15:29 GMT

ಬೆಂಗಳೂರು, ಎ.22: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಹಿನ್ನೆಲೆಯಲ್ಲಿ ಕಳೆದ 24 ಗಂಟೆಯಲ್ಲಿ 2.36 ಕೋಟಿ ರೂ.ನಗದು, 1.76 ಕೋಟಿ ರೂ. ಮೌಲ್ಯದ ಚಿನ್ನ ಹಾಗೂ 13.24 ಕೋಟಿ ರೂ. ಮೌಲ್ಯದ ಮದ್ಯ ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಫ್ಲೈಯಿಂಗ್ ಸ್ಕ್ವಾಡ್‌ಗಳು ಯಶಸ್ವಿಯಾಗಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.

ಅಬಕಾರಿ ಇಲಾಖೆ 4.21ಕೋಟಿ ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡು 91 ಪ್ರಕರಣ ಹಾಗೂ ಮದ್ಯದ ಪರವಾನಿಗೆಯನ್ನು ಉಲ್ಲಂಘಿಸಿದ 65 ಪ್ರಕರಣಗಳನ್ನು ದಾಖಲಿಸಿದೆ. ಹಾಗೂ ಸಿಆರ್‌ಪಿಸಿ ಕಾಯ್ದೆಯಡಿ 657 ವ್ಯಕ್ತಿಗಳಿಂದ ಮುಚ್ಚಳಕೆಯನ್ನು ಪಡೆಯಲಾಗಿದ್ದು, 897 ಜಾಮೀನು ರಹಿತ ವಾರೆಂಟ್‌ಗಳನ್ನು ಹೊರಡಿಸಲಾಗಿದೆ ಎಂದು ಅವರು ಪತ್ರಿಕಾ ಪಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News