ನೀತಿ ಸಂಹಿತೆ ಉಲ್ಲಂಘಿಸಿ ಮದ್ಯ ಮಾರಾಟ: 456 ಮದ್ಯದಂಗಡಿಗಳ ಪರವಾನಗಿ ರದ್ದು

Update: 2018-04-22 16:01 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.22: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವ ಮದ್ಯದಂಗಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಅಬಕಾರಿ ಅಧಿಕಾರಿಗಳು ನೀತಿ ಸಂಹಿತೆ ಉಲ್ಲಂಘಿಸಿ ಮದ್ಯ ಮಾರಾಟ ಮಾಡುತ್ತಿದ್ದ ರಾಜ್ಯದ 456 ಮದ್ಯದ ಅಂಗಡಿಗಳ ಪರವನಾಗಿ(ಲೈಸೆನ್ಸ್) ರದ್ದು ಮಾಡಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ 80, ಉತ್ತರ ಕನ್ನಡ ಜಿಲ್ಲೆಯಲ್ಲಿ 12 ಹಾಗೂ ಗದಗ ಜಿಲ್ಲೆಯಲ್ಲಿ ಒಟ್ಟು 24 ಪರವಾನಗಿಗಳನ್ನು ಅಮಾನತುಗೊಳಿಸಲಾಗಿದ್ದು, ಹಾವೇರಿ ಜಿಲ್ಲೆಯಲ್ಲಿ 19 ಮದ್ಯದಂಗಡಿಗಳು ಬಂದ್‌ ಆಗಿವೆ. ಒಟ್ಟಾರೆ ರಾಜ್ಯಾದ್ಯಂತ 456 ಮದ್ಯದಂಗಡಿಗಳ ಪರವಾನಗಿ ರದ್ದುಪಡಿಸಲಾಗಿದೆ.

ಕಾನೂನು ಉಲ್ಲಂಘನೆ ಮಾಡಿರುವ ಮದ್ಯದಂಗಡಿಗಳ ಮೇಲೆ ಕಠಿಣ ಕ್ರಮಕ್ಕೆ ಅಬಕಾರಿ ಇಲಾಖೆಯ ಆಯುಕ್ತ ಮನೀಶ್ ಮೌದ್ಗಿಲ್ ಆದೇಶಿಸಿರುವ ಹಿನ್ನೆಲೆಯಲ್ಲಿ ಆಯಾ ಅಬಕಾರಿ ಡಿಸಿಗಳಿಂದ ಪರಿಶೀಲನೆ ನಡೆಯುತ್ತಿದೆ. ಚುನಾವಣಾ ನೀತಿ ಸಂಹಿತೆ ಮುಕ್ತಾಯವಾಗುವವರೆಗೂ ನಿಯಮ ಉಲ್ಲಂಘಿಸಿದವರ ಲೈಸೆನ್ಸ್ ರದ್ದುಗೊಳಿಸಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News