ಸಂಸದ ನಳಿನ್‌, ಗಣೇಶ್ ಕಾರ್ಣಿಕ್, ಹರಿಕೃಷ್ಣ ಬಂಟ್ವಾಳ್ ವಿರುದ್ಧ ಪ್ರಕರಣ ದಾಖಲು

Update: 2018-04-23 06:57 GMT

ಬಂಟ್ವಾಳ, ಎ. 23: ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಸಂಸದ ನಳಿನ್‌ ಕುಮಾರ್ ಕಟೀಲು ಸಹಿತ ಮೂವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಪ್ರಮುಖರಾದ ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್, ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ್ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎ. 20ರಂದು ಬಿ.ಸಿ.ರೋಡಿನ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಅವರನ್ನು ವೈಯಕ್ತಿಕವಾಗಿ ನಿಂದಿಸಲಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಕ್ಯಾ. ಗಣೇಶ್ ಕಾರ್ಣಿಕ್, ಹರಿಕೃಷ್ಣ ಬಂಟ್ವಾಳ್ ತಮ್ಮ ಭಾಷಣದಲ್ಲಿ ರೈ ಅವರನ್ನು ವೈಯಕ್ತಿಕವಾಗಿ ನಿಂದಿಸುವ ಮೂಲಕ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಚುನಾವಣಾ ನೀತಿಸಂಹಿತೆ ಉಲ್ಲಂಘನಾ ಕಣ್ಗಾವಲು ಅಧಿಕಾರಿ ಅಬ್ದುಲ್ ರಝಾಕ್ ಅವರು ಈ ಬಗ್ಗೆ ದೂರು ನೀಡಿದ್ದು, ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News