ಬಾದಾಮಿ ಕ್ಷೇತ್ರದಲ್ಲಿ ಎ.24 ರಂದು ಸಿ.ಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ

Update: 2018-04-23 13:46 GMT

ಬೆಂಗಳೂರು, ಎ. 23: ಸಾರ್ವಜನಿಕರು ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಬಾದಾಮಿ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಎ.24) ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ನಾಳೆ ಬೆಳಗ್ಗೆ 9ಗಂಟೆಗೆ ಮೈಸೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದು ಅಲ್ಲಿಂದ ರಸ್ತೆ ಮೂಲಕ ಬಾದಾಮಿಗೆ ತೆರಳಲಿ ಮಧ್ಯಾಹ್ನ 12:30ಕ್ಕೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ ಎಂದು ಗೊತ್ತಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ರಾತ್ರಿ ಬಾದಾಮಿಯಲ್ಲೇ ವಾಸ್ತವ್ಯ ಹೂಡಲಿದ್ದು, ಗೆಲುವಿಗೆ ಕೈಗೊಳ್ಳಬೇಕಾದ ರಣತಂತ್ರದ ಕುರಿತು ಸ್ಥಳೀಯ ಮುಖಂಡ ಜತೆ ಸಮಾಲೋಚನೆ ನಡೆಸಲಿದ್ದು, ಬುಧವಾರ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ತಿಳಿಸಲಾಗಿದೆ.

ಕೊನೆಯ ದಿನ: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಎ.24 ಕಡೇ ದಿನವಾಗಿದ್ದು, ಕಾಂಗ್ರೆಸಿನ-174, ಬಿಜೆಪಿ-178, ಜೆಡಿಎಸ್-141 ಹಾಗೂ 457 ಮಂದಿ ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ ಒಟ್ಟು 1127 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಉಮೇದುವಾರಿಕೆ ಸಲ್ಲಿಕೆಗೆ ನಾಳೆ ಮಧ್ಯಾಹ್ನ 3 ಕ್ಕೆ ಕೊನೆಯಾಗಿದೆ. ಆದರೂ, ಬಿಜೆಪಿ, ಜೆಡಿಎಸ್ ಪಕ್ಷಗಳು ಇನ್ನೂ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿವೆ. ಎ.17 ರಿಂದ 23ರ ವರೆಗೆ ಒಟ್ಟಾರೆ 1127 ಅಭ್ಯರ್ಥಿಗಳು ಅಖಾಡದಲ್ಲಿದ್ದು, ಎ.25ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಎ.27ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News