ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ: ಅರ್ಜಿ ವಿಚಾರಣೆ ಎ.25 ಕ್ಕೆ ಮುಂದೂಡಿದ ಹೈಕೋರ್ಟ್

Update: 2018-04-23 15:35 GMT

ಬೆಂಗಳೂರು, ಎ.23: ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ತಮ್ಮನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಎ.25ಕ್ಕೆ ಮುಂದೂಡಿದೆ.

ಸರಕಾರದ ವರ್ಗಾವಣೆ ಆದೇಶ ಹಾಗೂ ಆ ಆದೇಶವನ್ನು ಎತ್ತಿ ಹಿಡಿದು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ನೀಡಿರುವ ತೀರ್ಪು ರದ್ದಪಡಿಸುವಂತೆ ಕೋರಿ ರೋಹಿಣಿ ಸಿಂಧೂರಿ ದಾಸರಿ ಸಲ್ಲಿಸಿರುವ ತಕರಾರು ಅರ್ಜಿಯು ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಬಿ.ಶ್ರೀನಿವಾಸೇಗೌಡ ಅವರ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ಹಾಜರಿದ್ದ ರೋಹಿಣಿ ಸಿಂಧೂರಿ ಪರ ವಕೀಲರು, ಅರ್ಜಿಯೊಂದಿಗೆ ಸಲ್ಲಿಸಲಾಗಿರುವ 150 ಪುಟಗಳ ಸಿಎಟಿ ಆದೇಶ ಪ್ರತಿಯಲ್ಲಿ 136ನೇ ಪುಟ ಬಿಟ್ಟು ಹೋಗಿದ್ದು, ಲಗತ್ತಿಸಲು ಕಾಲಾವಕಾಶ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಸಮ್ಮತಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News