14 ವರ್ಷದ ಬಾಲಕಿಯ ಅತ್ಯಾಚಾರಗೈದವನ ಬಂಧನ

Update: 2018-04-23 16:26 GMT
ಸಾಂದರ್ಭಿಕ ಚಿತ್ರ

ಅಗರ್ತಲಾ, ಎ.23: ತ್ರಿಪುರಾದ ಖೊವಾಯಿ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯನ್ನು ಮೂರು ತಿಂಗಳು ಅತ್ಯಾಚಾರ ಎಸಗಿದ 58 ವರ್ಷದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಈ ವ್ಯಕ್ತಿ ಇಲ್ಲಿಂದ 60 ಕಿ.ಮೀ. ದೂರದ ಛಂಪ್ಲಾಯಿಯಲ್ಲಿರುವ ತನ್ನ ಮನೆಯಲ್ಲಿ ಕಳೆದ ವರ್ಷದ ಫೆಬ್ರವರಿಯಿಂದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ‘‘ಕಳೆದ ವರ್ಷ ಫೆಬ್ರವರಿಯಿಂದ 11 ಬಾರಿ ನನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂಬ ಬಾಲಕಿಯ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಆತನ ಮನೆಯಿಂದ ಶನಿವಾರ ಬಂಧಿಸಲಾಗಿದೆ.’’ ಎಂದು ಖೊವಾಯಿ ಪೊಲೀಸ್ ಠಾಣೆಯ ಪೊಲೀಸ್ ಅಧೀಕ್ಷಕ ಕೃಷ್ಣೇಂದ್ರು ಚಕ್ರವರ್ತಿ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆತನಿಗೆ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ ಮೂಲಗಳು ತಿಳಿಸಿವೆ. ಆರೋಪಿಗೆ ತಲೈಮುರಾದಲ್ಲಿ ಏಳು ಉದ್ಯಮಗಳಿವೆ. ಆತ ಪ್ರಭಾವಿ ವ್ಯಕ್ತಿ. ಮುಂದಿನ ತನಿಖೆ ನಡೆಯುತ್ತಿದೆ ಎಂದು ಚಕ್ರವರ್ತಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News