ಯಮನ್: ಮದುವೆ ಕಾರ್ಯಕ್ರಮದ ಮೇಲೆ ದಾಳಿ; 40 ಸಾವು

Update: 2018-04-23 17:30 GMT

ದುಬೈ, ಎ. 23: ವಾಯುವ್ಯ ಯಮನ್‌ನ ಗ್ರಾಮವೊಂದರಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮವೊಂದರ ಮೇಲೆ ಸೌದಿ ಅರೇಬಿಯ ನೇತೃತ್ವದ ಮೈತ್ರಿಕೂಟ ರವಿವಾರ ತಡರಾತ್ರಿ ವಾಯು ದಾಳಿ ನಡೆಸಿದಾಗ ಕನಿಷ್ಠ 40 ಮಂದಿ ಮೃತಪಟ್ಟಿದ್ದಾರೆ ಎಂದು ನಿವಾಸಿಗಳು ಮತ್ತು ವೈದ್ಯಕೀಯ ಮೂಲಗಳು ತಿಳಿಸಿವೆ.

 ಹಜ್ಜಾಜ್‌ನಲ್ಲಿರುವ ಆಸ್ಪತ್ರೆಯೊಂದಕ್ಕೆ 40 ಮೃತದೇಹಗಳನ್ನು ತರಲಾಗಿದೆ ಎಂದು ಆಸ್ಪತ್ರೆಯ ಮುಖ್ಯಸ್ಥರು ‘ರಾಯ್ಟರ್ಸ್’ಗೆ ತಿಳಿಸಿದರು. 30 ಮಕ್ಕಳು ಸೇರಿದಂತೆ 46 ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಮದುವೆ ಮನೆಯ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ 40 ಮಂದಿ ಮೃತಪಟ್ಟಿದ್ದಾರೆ ಹಾಗೂ ಕನಿಷ್ಠ 30 ಮಂದಿ ಗಾಯಗೊಂಡಿದ್ದಾರೆ ಎಂದು ನಿವಾಸಿಗಳು ಮತ್ತು ವೈದ್ಯರು ಹೇಳಿದ್ದಾರೆ.

‘‘ನಾವು ಈ ವರದಿಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು’’ ಎಂದು ಸೌದಿ ನೇತೃತ್ವದ ಮೈತ್ರಿಕೂಟದ ವಕ್ತಾರರೊಬ್ಬರು ‘ರಾಯ್ಟರ್ಸ್’ಗೆ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News