ಕರಾವಳಿ ಕಾವಲು ಪಡೆ ತರಬೇತಿ ಕೇಂದ್ರಕ್ಕೆ ಜಮೀನು ಹಸ್ತಾಂತರ: ಕೆಐಎಡಿಬಿ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

Update: 2018-04-23 17:11 GMT

ಬೆಂಗಳೂರು, ಎ.23: ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಮತ್ತು ಕೆಂಚೂರು ಬಳಿ ಗುರುಪುರ ನದಿ ಸಮೀಪದ 160 ಎಕರೆ ಜಮೀನನ್ನು ಭಾರತೀಯ ಕರಾವಳಿ ಕಾವಲು ಪಡೆ ತರಬೇತಿ ಕೇಂದ್ರಕ್ಕೆ ಹಸ್ತಾಂತರಿಸಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಆದೇಶಕ್ಕೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಸೋಮವಾರ ತೆರವುಗೊಳಿಸಿದೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಆದೇಶ ಪ್ರಶ್ನಿಸಿ ಜೈಪ್ರಕಾಶ್ ಎಂಜಿನಿಯರಿಂಗ್ ಆ್ಯಂಡ್ ಸ್ಟೀಲ್ ಕಂಪೆನಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿ ಸಂಬಂಧ ಕೆಲಕಾಲ ವಾದ-ಪ್ರತಿವಾದ ಆಲಿಸಿದ ನಂತರ, ಇದೊಂದು ರಾಷ್ಟ್ರೀಯ ಹಿತಾಸಕ್ತಿ ಹೊಂದಿದ ಪ್ರಕರಣವಾಗಿದೆ. ಅರ್ಜಿಗೆ ಪ್ರತಿ ಆಕ್ಷೇಪಣೆಗಳನ್ನು ಸಲ್ಲಿಸಿದ ನಂತರ ಮುಂದೆ ಕೈಕಗೊಳ್ಳಬೇಕಾದ ತೀರ್ಮಾನಗಳ ಬಗ್ಗೆ ಹರಿಸೋಣ. ಸದ್ಯದ ಪಟ್ಟಿಗೆ ಜಮೀನು ಹಂಸ್ತಾಂತರ ಆದೇಶಕ್ಕೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸುವುದು ಸೂಕ್ತ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು. ಹಾಗೆಯೇ, ತಡೆಯಾಜ್ಞೆ ತೆರವುಗೊಳಿಸಿತಲ್ಲದೆ, ಈ ಆದೇಶವು ಅರ್ಜಿ ಕುರಿತ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿತು. ಬಳಿಕ ವಿಚಾರಣೆಯನ್ನು ಜೂನ್‌ಗೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News