ಐಪಿಎಲ್: ಕಿಂಗ್ಸ್ ಇಲೆವೆನ್ ಪಂಜಾಬ್‌ಗೆ ರೋಚಕ ಜಯ

Update: 2018-04-23 18:16 GMT

ಹೊಸದಿಲ್ಲಿ, ಎ.23: ಐಪಿಎಲ್ ಟ್ವೆಂಟಿ-20 ಟೂರ್ನಿಯ 22ನೇ ಪಂದ್ಯದಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 4 ರನ್‌ಗಳ ರೋಚಕ ಜಯ ಗಳಿಸಿದೆ.

ಇಲ್ಲಿನ ಫಿರೋಝ್ ಶಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 144 ರನ್‌ಗಳ ಸವಾಲು ಪಡೆದ ಡೆಲ್ಲಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 139 ರನ್ ಗಳಿಸಿತು.

ಶ್ರೇಯಸ್ ಅಯ್ಯರ್ 57 ರನ್(45ಎ, 5ಬೌ,1ಸಿ) ಗಳಿಸಿ ಹೋರಾಟ ನಡೆಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಅವರಿಗೆ ಸಾಧ್ಯವಾಗಲಿಲ್ಲ.

ಪ್ರಥ್ವಿ ಶಾ 22ರನ್, ನಾಯಕ ಗೌತಮ್ ಗಂಭೀರ್ 4ರನ್,ಗ್ಲೆನ್ ಮ್ಯಾಕ್ಸ್‌ವೆಲ್ 12ರನ್,ರಿಷಬ್ ಪಂತ್ 4ರನ್, ಡೇನಿಯಲ್ ಕ್ರಿಶ್ಚಿಯನ್ 6 ರನ್ ಗಳಿಸಿ ಔಟಾದ ತಂಡದ ಸ್ಕೋರ್ 12 ಓವರ್‌ಗಳಲ್ಲಿ 5 ವಿಕೆಟ್ ನಷ್ಟದಲ್ಲಿ 76 ಆಗಿತ್ತು. ಆನಂತರ ಶ್ರೇಯಸ್ ಅಯ್ಯರ್ ಮತ್ತು ರಾಹುಲ್ ಟೆವಾಟಿಯಾ ಜೊತೆಯಾಗಿ 47 ರನ್ ಸೇರಿಸಿದರು. ರಾಹುಲ್ 24 ರನ್ ಗಳಿಸಿ ಔಟಾಗುತ್ತಿದ್ದಂತೆ ತಂಡ ಒತ್ತಡಕ್ಕೆ ಸಿಲುಕಿತು. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 143 ರನ್ ಗಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News