ಮೈಸೂರು ಪ್ರಾಂತ್ಯದಲ್ಲಿ ಜೆಡಿಎಸ್- ಬಿಜೆಪಿ ಒಳ ಒಪ್ಪಂದ ಮಾಡಿದೆ: ಎನ್. ಚಲುವರಾಯಸ್ವಾಮಿ

Update: 2018-04-23 18:41 GMT

ಮದ್ದೂರು, ಎ.23: ಮೈಸೂರು ಪ್ರಾಂತ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದು, ಹಲವು ಕಡೆ ದುರ್ಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ ಎಂದು ಮಾಜಿ ಶಾಸಕ ಎನ್.ಚಲುವರಾಯಸ್ವಾಮಿ ಆರೋಪಿಸಿದ್ದಾರೆ.

ಮಧು ಮಾದೇಗೌಡ ನಾಮಪತ್ರ ಸಲ್ಲಿಕೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಆರ್.ಪೇಟೆ, ಮದ್ದೂರು, ಮಂಡ್ಯ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷಕ್ಕೆ ಶ್ರಮಿಸಿದ ಆಕಾಂಕ್ಷಿಗಳನ್ನು ಬಿಟ್ಟು ಹೊಸಬರಿಗೆ ಟಿಕೆಟ್ ನೀಡಿರುವುದೇ ಒಳ ಒಪ್ಪಂದಕ್ಕೆ ಸಾಕ್ಷಿಯಾಗಿದೆ ಎಂದರು.

ಕಲ್ಪನಾ ಸಿದ್ದರಾಜು ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರು ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಕಲ್ಪನಾ ಅವರು ಯಾವುದೇ ಪ್ರತಿಕ್ರಿಯೆ ನೀಡಿರುವುದಿಲ್ಲ. ಹೀಗಾಗಿ ಈ ಬಗೆಗೆ ನಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮಂಡ್ಯ ಟಿಕೆಟ್ ಸಂಬಂಧವಾಗಿ ಅಂಬರೀಶ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಈ ಬಗ್ಗೆ ನಾನು ಮಾತನಾಡುವುದಿಲ್ಲ. ಅಂಬರೀಶ್ ಮತ್ತು ನನ್ನ ಸಂಬಂಧ ಚೆನ್ನಾಗಿದೆ ಎಂದು ಅವರು ಹೇಳಿದರು.

ಮಧು ಜಿ.ಮಾದೇಗೌಡ ಮಾತನಾಡಿ, ಅಂಬರೀಶ್ ಹಾಗೂ ಚಲುವರಾಯಸ್ವಾಮಿ ನೇತೃತ್ವದಲ್ಲಿ ಚುನಾವಣೆ ಎದುರುಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ಜನಪರ ಆಡಳಿತ, ಯೋಜನೆಗಳು ತಮ್ಮ ಗೆಲುವಿಗೆ ಸಹಕಾರಿಯಾಗಲಿವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News