ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ

Update: 2018-04-24 04:21 GMT
ಸಾಂದರ್ಭಿಕ ಚಿತ್ರ

ದಾವಣಗೆರೆ, ಎ.24: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯೊಬ್ಬನ ಆರೋಪ ಸಾಬೀತಾಗಿದ್ದು, ದಾವಣಗೆರೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿಗೆ 10 ವರ್ಷ ಜೈಲು ವಿಧಿಸಿ ತೀರ್ಪು ನೀಡಿದೆ.

ಹರಪನಹಳ್ಳಿ ತಾಲೂಕಿನ ಬೇವಿನಹಳ್ಳಿ ದೊಡ್ಡತಾಂಡದ ನಿವಾಸಿ ಭೋಜರಾಜ್(25) ಶಿಕ್ಷೆಗೊಳಗಾದ ಅಪರಾಧಿ. ಈತನಿಗೆ 10 ವರ್ಷ ಜೈಲು ಶಿಕ್ಷೆಯೊಂದಿಗೆ 25 ಸಾವಿರ ರೂ. ದಂಡ ಕೂಡಾ ವಿಧಿಸಲಾಗಿದೆ.

 ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಭೋಜರಾಜ್ ವಿರುದ್ಧ 2017ರ ಮೇ 6ರಂದು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ದಾವಣಗೆರೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಎಸ್.ನಾಗಾಶ್ರೀ ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಸರಕಾರಿ ಅಭಿಯೋಜಕರಾಗಿ ಎಸ್.ಎಚ್.ಎಸ್.ಶೌಕತ್ ಅಲಿ ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News