ವಿರಾಜಪೇಟೆ ಕ್ಷೇತ್ರ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ

Update: 2018-04-24 11:05 GMT

ಮಡಿಕೇರಿ,ಎ.24: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಕೆ.ಜಿ.ಬೋಪಯ್ಯ ಇಂದು ನಾಮಪತ್ರ ಸಲ್ಲಿಸಿದರು.  

ಉಮೇದುವಾರಿಕೆಗೂ ಮೊದಲು ಶ್ರೀಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕೆ.ಜಿ.ಬೋಪಯ್ಯ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೂರನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಅವರುಗಳು ಬೋಪಯ್ಯ ನಾಮಪತ್ರ ಸಲ್ಲಿಸುವ ಸಂದರ್ಭ ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News