ಶಿವಮೊಗ್ಗ: ಬಸ್ ಢಿಕ್ಕಿ; ಬೈಕ್ ಸವಾರ ಮೃತ್ಯು

Update: 2018-04-24 11:25 GMT

ಶಿವಮೊಗ್ಗ, ಎ. 24: ಬಸ್ ಚಾಲಕನ ಅಜಾಗರೂಕ ಚಾಲನೆಯಿಂದ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು, ಮಹಿಳೆ ಗಾಯಗೊಂಡ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಿದ್ದನಪುರ ಗ್ರಾಮದಲ್ಲಿ ನಡೆದಿದೆ. 

ನಳ್ಳಿನಕೊಪ್ಪ ಗ್ರಾಮದ ನಿವಾಸಿ ಸೋಮಶೇಖರನಾಯ್ಕ್ (35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರ ಪತ್ನಿ ಜ್ಯೋತಿಬಾಯಿ (29) ಎಂಬವರು ಗಾಯಗೊಂಡಿದ್ದು, ಇವರು ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೈಕ್‍ನಲ್ಲಿ ದಂಪತಿಯು ಮುದ್ದನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News