ಎ. 26 ರಂದು ಹೊನ್ನಾವರಕ್ಕೆ ರಾಹುಲ್ ಗಾಂಧಿ ಆಗಮನ

Update: 2018-04-24 12:19 GMT

ಹೊನ್ನಾವರ,ಎ.24: ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಎ. 26 ರಂದು ಹೊನ್ನಾವರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಅಂದು ಸಂಜೆ 4 ಗಂಟೆಗೆ ಪಟ್ಟಣದ ಶರಾವತಿ ಸರ್ಕಲ್ ಬಳಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಅವರಿಗೆ ಭವ್ಯ ಸ್ವಾಗತ ನೀಡಲಾಗುವುದು. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News