ಬೇಡಗುಡ್ಡೆ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ; ಇಬ್ಬರು ಆರೋಪಿಗಳ ಬಂಧನ

Update: 2018-04-24 12:50 GMT

ಮಂಜೇಶ್ವರ, ಎ.24: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿ ಇಬ್ಬರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

ಸುಂಕದಕಟ್ಟೆ ಬೇಡಗುಡ್ಡೆಯ ರಾಝಿಕ್(24), ಅಬ್ದುಲ್ ನೌಫಲ್(19) ಬಂಧಿತ ಆರೋಪಿಗಳಾಗಿದ್ದಾರೆ.

 ಕಳೆದ ವಾರ ಬೇಡಗುಡ್ಡೆ ಸುಂಕದಕಟ್ಟೆಯಲ್ಲಿ ಗಸ್ತು ತಿರುಗುತ್ತಿದ್ದ ವಿಟ್ಲ ಪೊಲೀಸ್ ಠಾಣೆಯ ಪಿಎಸ್ಸೈ ನೇತೃತ್ವದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಮಂಜೇಶ್ವರ ಠಾಣೆ ಎಸ್ಸೈ ಅನೂಬ್ ಕುಮಾರ್ ನೇತೃತ್ವದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News