ಅಮ್ಮುಂಜೆಯಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ
Update: 2018-04-24 19:49 IST
ಬಂಟ್ವಾಳ, ಎ. 24: ಬಂಟ್ವಾಳ ತಾಲೂಕಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಅಮ್ಮುಂಜೆ ಕಲಾಯಿ ಗುಡ್ಡೆಯಲ್ಲಿ ಮಂಗಳವಾರ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿದೆ.
ಅಮ್ಮುಂಜೆ ಕಲಾಯಿ ಗುಡ್ಡೆಗೆ ಕಟ್ಟಿಗೆ ತರಲು ಹೋಗಿದ್ದ ಸ್ಥಳೀಯ ನಿವಾಸಿ ಸುರೇಶ್ ಎಂಬವರು ಈ ಅಸ್ಥಿಪಂಜರವನ್ನು ಗಮನಿಸಿ ಬಂಟ್ವಾಳ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶಿಲನೆ ನಡೆಸಿದ್ದು, ಪರೀಕ್ಷೆಗಾಗಿ ಅಸ್ಥಿಪಂಜರನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ.
ಪ್ರೊಬೇಶನರಿ ಐಪಿಎಸ್ ಅಕ್ಷಯ್ ಎಂ. ಹಾಕೆ, ಗ್ರಾಮಾಂತರ ಠಾಣಾ ಉಪನಿರೀಕ್ಷಕ ಪ್ರಸನ್ನ ಸ್ಥಳಕ್ಕೆ ಭೇಟಿ ನೀಡಿ, ಪರೀಶಿಲನೆ ನಡೆಸಿದ್ದು, ತನಿಖೆ ಮುಂದುವರಿದಿದೆ.