ನಾಮಪತ್ರ ಹಿಂಪಡೆಯಲು ಎ.27 ಕೊನೆಯ ದಿನ: ಎ.25ಕ್ಕೆ ನಾಮಪತ್ರ ಪರಿಶೀಲನೆ

Update: 2018-04-24 14:31 GMT

ಬೆಂಗಳೂರು, ಎ. 24: ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಂಗಳವಾರ ಮಧ್ಯಾಹ್ನ ಮುಕ್ತಾಯವಾಗಿದ್ದು, ಎ.25 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಎ.27ಕ್ಕೆ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ.

ಕೊನೆಯ ದಿನವಾದ ಇಂದು ರಾಜ್ಯದ ಗಮನ ಸೆಳೆದಿರುವ ಬಾಗಲಕೋಟೆ ಜಿಲ್ಲೆ ಬಾದಾಮಿ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ, ಬಿಜೆಪಿಯಿಂದ ಬಿ.ಶ್ರೀರಾಮುಲು ನಾಮಪತ್ರ ಸಲ್ಲಿಸಿದರು. ಕೊನೆಯ ಕ್ಷಣದಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆಯಿಂದ ನಟ ಅಂಬರೀಶ್ ಹಿಂದೆ ಸರಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗಣಿಗ ಪಿ.ರವಿಕುಮಾರ್ ಅವರನ್ನು ಕಣಕ್ಕಿಳಿಸಿದೆ.

ರಾಜ್ಯದ ಜನರಲ್ಲಿ ಕುತೂಹಲ ಕೆರಳಿಸಿದ್ದ ವರುಣಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರನ ವಿರುದ್ಧ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕಣಕ್ಕಿಳಿಯಲಿದ್ದಾರೆಂದು ಘೋಷಿಸಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಬಸವರಾಜಪ್ಪ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಎ.17ರಿಂದ ಎ.24ರ ಮಧ್ಯಾಹ್ನ 3ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಈ ಸಂಬಂದ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಚುನಾವಣಾ ಕಚೇರಿಯನ್ನು ತರೆದು ವ್ಯವಸ್ಥೆ ಮಾಡಲಾಗಿತ್ತು. ಮೆರವಣಿಗೆಗೆ ಭದ್ರತಾ ವ್ಯವಸ್ಥೆಯನ್ನೂ ಒದಗಿಸಲಾಗಿತ್ತು.

-ಎ.25ಕ್ಕೆ ನಾಮಪತ್ರ ಪರಿಶೀಲನೆ
-ಎ.27ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯದಿನ
-ಮೇ 12ಕ್ಕೆ ಮತದಾನ
-ಮೇ 15ಕ್ಕೆ ಮತ ಏಣಿಕೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News