‘ಸಿಇಟಿ-2018’ ತಾತ್ಕಾಲಿಕ ಸರಿ ಉತ್ತರಗಳ ಪ್ರಕಟ

Update: 2018-04-24 14:45 GMT

ಬೆಂಗಳೂರು, ಎ.24: ಸಿಇಟಿ-2018ರ ಸಾಮಾನ್ಯ ಪ್ರವೇಶ ಪರೀಕ್ಷೆಯ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ತಾತ್ಕಾಲಿಕ ಸರಿ ಉತ್ತರಗಳನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಪ್ರಕಟಿಸಿರುವ ತಾತ್ಕಾಲಿಕ ಸರಿ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಆಧಾರ ಸಹಿತ ಆಕ್ಷೇಪಣೆಗಳನ್ನು ಇ-ಮೇಲ್ keauthority-ka@nic.in ವಿಳಾಸಕ್ಕೆ ಎ.30ರ ಸಂಜೆ 5.30 ಗಂಟೆಯೊಳಗಾಗಿ ಕಳುಹಿಸಬಹುದಾಗಿದೆ.

ಅಭ್ಯರ್ಥಿಗಳು ಆಕ್ಷೇಪಣೆಗಳನ್ನು ಸಲ್ಲಿಸುವಾಗ ವಿಷಯದ ಹೆಸರು, ವರ್ಷನ್ ಕೋಡ್, ಪ್ರಶ್ನೆ ಪತ್ರಿಕೆಯ ಪ್ರಶ್ನೆ ಸಂಖ್ಯೆ ಮತ್ತು ನಿರ್ದಿಷ್ಟವಾದ ನಿಗದಿತ ಆಕ್ಷೇಪಣೆಗಳನ್ನು ಎಲ್ಲ ವಿವರಗಳೊಂದಿಗೆ ಸಲ್ಲಿಸಲು ಸೂಚಿಸಲಾಗಿದೆ.

ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೆ ಅಥವಾ ಆಧಾರ ರಹಿತ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ನೀಡುವ ಕೀ ಉತ್ತರಗಳು ಅಂತಿಮವಾಗಿರುತ್ತದೆ ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News