ಎ.25ರಂದು ಮಾನವ ಹಕ್ಕುಗಳ ಸಮಿತಿಯಿಂದ ಪ್ರತಿಭಟನೆ

Update: 2018-04-24 18:00 GMT

ಮಂಗಳೂರು, ಎ.24: ದೇಶಾದ್ಯಂತ ಹೆಚ್ಚುತ್ತಿರುವ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಖಂಡಿಸಿ ಏ.25ರಂದು ಸಂಜೆ 4.30ಕ್ಕೆ ಮಾನವ ಹಕ್ಕುಗಳ ಸಮಿತಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಹಸೀನಾ ಇಸ್ಮಾಯೀಲ್, ದೇಶದಲ್ಲಿ ಮಹಿಳೆ ಮತ್ತು ಮಕ್ಕಳ ದೌರ್ಜನ್ಯಗಳು ಹೆಚ್ಚುತ್ತಿರುವುದು ಖೇದಕರ. ಈ ಬಗ್ಗೆ ಪ್ರತಿಯೊಬ್ಬರೂ ಗಂಭೀರವಾಗಿ ಚಿಂತಿಸಬೇಕಿದೆ ಎಂದರು.

 ಮಾನವ ಹಕ್ಕುಗಳ ಸಮಿತಿ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಅನ್ವರ್ ಉಳ್ಳಾಲ್ ಮಾತನಾಡಿ, ಪ್ರತಿಭಟನೆಯಲ್ಲಿ 300ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ. ಪ್ರತಿಭಟನೆಗೆ ಈಗಾಗಲೇ ಅನುಮತಿಯನ್ನು ಪಡೆದಿದ್ದೇವೆ. ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳಿಗ ಕಡಿವಾಣ ಬೀಳಬೇಕಿದೆ. ಮಾನವ ಹಕ್ಕುಗಳ ಸಮಿತಿ ಈ ನಿಟ್ಟಿನಲ್ಲಿ ನಿರಂತರ ಹೋರಾಟ ಸಂಘಟಿಸಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ಮುಹಮ್ಮದ್ ಶಬೀರ್,ಜುಲ್ಫಿಕರ್, ಮುಹಮ್ಮದ್ ಮೆಹ್ರಾಝ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News