ಕಾಶ್ಮೀರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಜಿ.ಎನ್.ಪಟೇಲ್ ಉಗ್ರರ ಗುಂಡಿಗೆ ಬಲಿ
Update: 2018-04-25 18:04 IST
ಶ್ರೀನಗರ,ಎ.25: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ರಾಜಪೋರಾದಲ್ಲಿ ಬುಧವಾರ ಮಧಾಹ್ನ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಪಟೇಲ್ ಅವರು ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ದಾಳಿಯಲ್ಲಿ ಅವರ ಇಬ್ಬರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದು,ಉಗ್ರರು ಅವರ ಸರ್ವಿಸ್ ರಿವಾಲ್ವರ್‌ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಪಟೇಲ್ ಅವರು ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದು,ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಬದುಕುಳಿಯಲಿಲ್ಲ.
ಪಿಡಿಪಿಯ ಪುಲ್ವಾಮಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪಟೇಲ್ ಕಳೆದ ವರ್ಷ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು.
ಪಟೇಲ್ ಅವರ ಸಾವಿಗೆ ಟ್ವಿಟರ್‌ನಲ್ಲಿ ಸಂತಾಪಗಳನ್ನು ವ್ಯಕ್ತಪಡಿಸಿರುವ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು,ಇದೊಂದು ಹೇಡಿತನದ ಕೃತ್ಯವೆಂದು ಬಣ್ಣಿಸಿದ್ದಾರೆ.