ರಾಜ್ಯ ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿದರೆ ಕ್ರಿಮಿನಲ್ ಮೊಕದ್ದಮೆ

Update: 2018-04-25 13:51 GMT

ಬೆಂಗಳೂರು, ಎ.25: ರಾಜ್ಯ ವಿಧಾನಸಭೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಳ್ಳುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಚುನಾವಣಾ ಆಯೋಗ ಮುಂದಾಗಿದೆ.

ಕಡಿಮೆ ಹಣ ನೀಡಿ ಮಕ್ಕಳನ್ನು ಪ್ರಚಾರ ಕಾರ್ಯದಲ್ಲಿ ಬಳಸಿಕೊಳ್ಳುವ ಮೂಲಕ ಹಣ ಉಳಿಸುವ ತಂತ್ರಕ್ಕೆ ಅಭ್ಯರ್ಥಿಗಳು ಹಾಗೂ ಅವರ ಅನುಯಾಯಿಗಳು ಇಂತಹ ಸಂದರ್ಭದಲ್ಲಿ ಮುಂದಾಗಲಿದ್ದು, ಅಂತಹವರ ವಿರುದ್ದ ಆಯೋಗ ಕ್ರಮ ಕೈಗೊಳ್ಳಲಿದೆ.

ಪತ್ರ: ಮಕ್ಕಳನ್ನು ಚುನಾವಣಾ ಕಾರ್ಯಕ್ಕೆ ಬಳಸುವುದನ್ನು ತಡೆಯಬೇಕು ಎಂದು ಕೇಂದ್ರ ಮಕ್ಕಳ ಹಕ್ಕು ಆಯೋಗವು ಚುನಾವಣಾ ಆಯೋಗಕ್ಕೆ ಪತ್ರವೊಂದನ್ನು ಬರೆದಿದೆ. ಮಕ್ಕಳ ಕೈಯಲ್ಲಿ ಪಕ್ಷದ ಬಾವುಟ, ಬ್ಯಾನರ್, ಬ್ರೋಷರ್ ಹಿಡಿಸುವುದು, ಕರಪತ್ರ ಹಂಚಿಸುವ ಕಾರ್ಯ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ಸ್ಪಷ್ಟವಾಗಿ ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News