ಎ.26 ರಂದು ಅಮಿತ್ ಶಾ ಕರ್ನಾಟಕಕ್ಕೆ ಆಗಮನ
ಬೆಂಗಳೂರು, ಎ. 25: ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ನಾಳೆ(ಎ.26) ಹೊಸದಿಲ್ಲಿಯಿಂದ ರಾಜ್ಯಕ್ಕೆ ಆಗಮಿಸಲಿದ್ದು, ಎ.27ರಿಂದ ನಾಲ್ಕು ದಿನಗಳ ಕಾಲ ಬಳ್ಳಾರಿ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ಕೋಲಾರ, ಕೊಪ್ಪಳ, ಬೆಂಗಳೂರು ನಗರದ ವಿವಿಧ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಎ.27ರ ಬೆಳಗ್ಗೆ ಬಳ್ಳಾರಿಯಲ್ಲಿ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ‘ಕರುನಾಡು ಜಾಗೃತಿ ಯಾತ್ರೆ’ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದು, ಅದೇ ದಿನ ಸಂಜೆ ಕುಕನೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಎ.28ರಂದು ಬಾಗಲಕೋಟೆಯ ಕೂಡಲಸಂಗಮಕ್ಕೆ ಭೇಟಿ ನೀಡಲಿದ್ದಾರೆ.
ತ್ರಿಕೋಟದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಎ.29 ಕ್ಕೆ ದಾವಣಗೆರೆ ಹಾಗೂ ಎ.30 ಕ್ಕೆ ಕೋಲಾರ ಹಾಗೂ ದೇವನಹಳ್ಳಿಯ ವಿವಿಧ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸರಣಿ ಸಭೆಗಳು ಹಾಗೂ ಪಕ್ಷದ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಆ್ಯಪ್ ಮೂಲಕ ಸಂಭಾಷಣೆ
ಪ್ರಧಾನಿ ನರೇಂದ್ರ ಮೋದಿ ಎ.26ರ ಬೆಳಗ್ಗೆ 9ಗಂಟೆಗೆ ‘ಮೋದಿ ಆ್ಯಪ್’ ಮೂಲಕ ಬಿಜೆಪಿ ಅಭ್ಯರ್ಥಿಗಳು, ಸಂಸದರನ್ನು ಉದ್ದೇಶಿಸಿ ಸಂಭಾಷಣೆ ಮಾಡಲಿದ್ದು, ಈ ವೇಳೆ ಮೋದಿಯವರು ಸಲಹೆ-ಸೂಚನೆಗಳನ್ನು ನೀಡಲಿದ್ದು ಕಾರ್ಯಕ್ರಮ ವೀಕ್ಷಿಸಲು ಸಿದ್ದರಿರುವಂತೆ ಎಲ್ಲರ ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ’
-ಶೋಭಾ ಕರಂದ್ಲಾಜೆ ಬಿಜೆಪಿ ಪ್ರಧಾನ ಕಾರ್ಯದರ್ಶಿ