×
Ad

ರಾಹುಲ್ ಕಾರ್ಯಕ್ರಮಕ್ಕೆ ಜನಾರ್ದನ ಪೂಜಾರಿಗೆ ಅಧಿಕೃತ ಆಹ್ವಾನ ನೀಡಿದ ಕಾಂಗ್ರೆಸ್

Update: 2018-04-25 20:59 IST

ಬಂಟ್ವಾಳ, ಎ.25: ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿಯವರ ಮನೆಗೆ ಮಂಗಳವಾರ ಭೇಟಿ ನೀಡಿದ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯು ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿತು.

ಜಿಲ್ಲೆಯಲ್ಲಿ ಕಾಂಗ್ರೆಸ್ ಈ ಬಾರಿ ಬಹುಮತದಿಂದ ಅಧಿಕಾರಕ್ಕೆ ಬರಲು ರಾಹುಲ್ ಗಾಂಧಿ ಭೇಟಿ ಪೂರಕವಾಗಲಿದೆ. ಎಂದ ಪೂಜಾರಿ, ಜಿಲ್ಲೆಯ ಕಾಂಗ್ರೆಸ್ ಒಗ್ಗಟ್ಟಿನ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

 ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್, ಡಿಸಿಸಿ ಉಪಾಧ್ಯಕ್ಷ ಬೇಬಿ ಕುಂದರ್, ಪ್ರಚಾರ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News