ಸಚಿವ ಎ.ಮಂಜು ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ಮಧ್ಯಂತರ ತಡೆ
Update: 2018-04-25 21:39 IST
ಬೆಂಗಳೂರು, ಎ.25: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸರಕಾರಿ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿಯಲ್ಲಿ ಸಚಿವ ಎ.ಮಂಜು ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ಬುಧವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಪ್ರಕರಣದ ಸಂಬಂಧ ಹಾಸನ ನಗರ ಪೊಲೀಸರು ಎ.4 ರಂದು ದಾಖಲಿಸಿರುವ ಎಫ್ಐಆರ್ ರದ್ದುಕೋರಿ ಸಚಿವ ಎ. ಮಂಜು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠ, ಎಫ್ಐಆರ್‌ಗೆ ತಡೆಯಾಜ್ಞೆ ನೀಡಿತು.
ಇದೇ ವೇಳೆ ಅರ್ಜಿಯ ಸಂಬಂಧ ಪ್ರತಿವಾದಿಗಳಾದ ಹಾಸನ ಅಪರ ಜಿಲ್ಲಾಧಿಕಾರಿ, ಹಾಸನ ನಗರ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹಾಸನ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.