ಬಾಲಕನಿಂದ ಬಾಲಕಿಯ ಅತ್ಯಾಚಾರ
ಕಾನ್ಪುರ, ಎ. 24: ಹದಿನಾರು ವರ್ಷದ ಬಾಲಕ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಥಳಿಸಿ ಗಂಭೀರ ಗಾಯಗೊಳಿಸಿದ ಘಟನೆ ಉತ್ತರಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಶಿವಾಲಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಸಹೋದರಿಯ ಎದುರಲ್ಲೇ ಬಾಲಕ ಈ ಕೃತ್ಯ ಎಸಗಿದ್ದಾನೆ ಎಂದು ಕಾನ್ಪುರ ದೇಹತ್‌ನ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ರತನ್ ಕಾಂತ್ ಪಾಂಡೆ ತಿಳಿಸಿದ್ದಾರೆ. ಬಾಲಕನೊಂದಿಗೆ ಆತನ ತಂದೆ ಹಾಗೂ ತಾಯಿ ಕೂಡ ಬಾಲಕಿಗೆ ಥಳಿಸಿದ್ದಾರೆ. ಇದರಿಂದ ಬಾಲಕಿ ಗಂಭೀರ ಗಾಯಗೊಂಡಿದ್ದಾಳೆ. ಇದಲ್ಲದೆ ಈ ವಿಚಾರ ಬಹಿರಂಗಗೊಳಿಸದಂತೆ ಬೆದರಿಕೆ ಒಡ್ಡಿದ್ದಾರೆ ಎಂದು ಪಾಂಡೆ ತಿಳಿಸಿದ್ದಾರೆ.
ಬಾಲಕಿಯನ್ನು ಆರಂಭದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತು. ಅನಂತರ ಕಾನ್ಪುರದ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಅವರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಹಾಗೂ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ ಹಾಗೂ ಬಾಲಕನ ತಂದೆ ಹಾಗೂ ತಾಯಿಯನ್ನು ಬಂಧಿಸಲಾಗಿದೆ ಎಂದು ಪಾಂಡೆ ತಿಳಿಸಿದ್ದಾರೆ.