×
Ad

ಜನತೆಯ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸುವೆ: ರಘುಪತಿ ಭಟ್

Update: 2018-04-25 22:01 IST

ಉಡುಪಿ, ಎ.25: ಉಡುಪಿಯ ಮಹಾ ಜನತೆ ಈ ಹಿಂದೆ ಎರಡು ಬಾರಿ ಶಾಸಕನಾಗಿ ಜನಸೇವೆಗೈಯಲು ಅವಕಾಶ ನೀಡಿ ಹರಸಿದ್ದಾರೆ. ಅದರಂತೆ ನವ ಉಡುಪಿಯ ನಿರ್ಮಾತೃ ದಿ.ಡಾ.ವಿ.ಎಸ್.ಆಚಾರ್ಯರ ಮಾರ್ಗದರ್ಶನದಲ್ಲಿ ಉಡುಪಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆ ಸಲ್ಲಿಸಿದ ತೃಪ್ತಿ ಇದೆ. ಕ್ಷೇತ್ರದ ಜನತೆ ಅಭಿವೃದ್ಧಿ ಪರ ಚಿಂತನೆಯುಳ್ಳವರಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಮಗದೊಮ್ಮೆ ಶಾಸಕನಾಗಿ ಆರಿಸಿ ಜನಪರ ಸೇವೆಗೈಯಲು ಅವಕಾಶ ನೀಡುವರೆಂಬ ಸಂಪೂರ್ಣ ವಿಶ್ವಾಸವಿದೆ. ಅವಕಾಶ ದೊರೆತಲ್ಲಿ ಜನತೆ ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ರಘುಪತಿ ಭಟ್ ಹೇಳಿದ್ದಾರೆ. 

ಅಂಬಲಪಾಡಿಯಲ್ಲಿ ಅಂಬಲಪಾಡಿ ನಗರ ಹಾಗೂ ಗ್ರಾಮಾಂತರ ಬಿಜೆಪಿ ಸ್ಥಾನೀಯ ಸಮಿತಿಗಳ ಜಂಟಿ ಸಭೆಯಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕತರನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಪ್ರಧಾನಿ ನರೇಂದ್ರ ಮೋದಿ ಮೇ 1ರಂದು ಚುನಾವಣಾ ಪ್ರಚಾರಕ್ಕಾಗಿ ಉಡುಪಿಗೆ ಆಗಮಿಸಲಿದ್ದು, ಇದು ನನ್ನ ಪಾಲಿನ ಸುಯೋಗ. ಈ ಹಿಂದೆ ನಾನು ಸ್ಪರ್ಧಿಸಿದ್ದ ಎರಡು ಚುನಾವಣೆಗಳ ಸಂದರ್ಭದಲ್ಲೂ ಮೋದೀಜಿ ಉಡುಪಿಗೆ ಆಗಮಿಸಿದ್ದು, ಈ ಬಾರಿಯೂ ಅವರ ಆಗಮನ ವಿಜಯದ ಸಂಕೇತವಾಗಿದೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ಅಂಬಲಪಾಡಿ ನಗರಾಧ್ಯಕ್ಷ ಹರೀಶ್ ಶೆಟ್ಟಿ ವಹಿಸಿದ್ದರು.

ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರವೀಣ್‌ಕುಮಾರ್ ಶೆಟ್ಟಿ ಕಪ್ಪೆಟ್ಟು, ಉಡುಪಿ ತಾಪಂ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News