ಅರ್ಜುನ ಪ್ರಶಸ್ತಿಗೆ ಬಿಸಿಸಿಐ ಶಿಫಾರಸು ಮಾಡಿದ್ದು ಈ ಕ್ರಿಕೆಟಿಗರನ್ನು…

Update: 2018-04-25 16:53 GMT

ಹೊಸದಿಲ್ಲಿ, ಎ.25: ಭಾರತದ ಆರಂಭಿಕ ಕ್ರಿಕೆಟಿಗ ಶಿಖರ್ ಧವನ್ ಹಾಗೂ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನರನ್ನು ಅರ್ಜುನ ಪ್ರಶಸ್ತಿಗೆ ಬಿಸಿಸಿಐ ಶಿಫಾರಸು ಮಾಡಿದೆ.

‘‘ನಾವು ಶಿಖರ್ ಧವನ್ ಹಾಗೂ ಸ್ಮೃತಿ ಮಂಧಾನರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಸೂಚಿಸುತ್ತಿದ್ದೇವೆ’’ ಎಂದು ಬಿಸಿಸಿಐ ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌಧರಿ ಹೇಳಿದ್ದಾರೆ.

32ರ ಹರೆಯದ ಧವನ್ ಇದೀಗ ಐಪಿಎಲ್‌ನಲ್ಲಿ ಹೈದರಾಬಾದ್ ತಂಡದ ಪರ ಆಡುತ್ತಿದ್ದಾರೆ. ಭಾರತ ಎಲ್ಲ ಮೂರು ಪ್ರಕಾರದ ಕ್ರಿಕೆಟ್‌ನಲ್ಲಿ ಆಡುತ್ತಿದ್ದಾರೆ. 2013ರಲ್ಲಿ ಆಸ್ಟ್ರೇಲಿಯ ವಿರುದ್ಧ ಚೊಚ್ಚಲ ಟೆಸ್ಟ್ ಶತಕ ಗಳಿಸಿದ ಬಳಿಕ ಭಾರತದ ಬ್ಯಾಟಿಂಗ್‌ನ ಪ್ರಮುಖ ಸದಸ್ಯರಾಗಿದ್ದಾರೆ.

21ರ ಹರೆಯದ ಮಂಧಾನ ಕಳೆದ ವರ್ಷ ಇಂಗ್ಲೆಂಡ್‌ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್‌ನಲ್ಲಿ ಭಾರತ ಫೈನಲ್‌ಗೆ ತಲುಪಲು ಪ್ರಮುಖ ಪಾತ್ರವಹಿಸಿದ್ದಾರೆ. ಈ ವರ್ಷ ಉತ್ತಮ ಪ್ರದರ್ಶನ ನೀಡಿರುವ ಅವರು ಐಸಿಸಿ ಮಹಿಳಾ ರ್ಯಾಂಕಿಂಗ್‌ನಲ್ಲಿ ಜೀವನಶ್ರೇಷ್ಠ 4ನೇ ಸ್ಥಾನ ಪಡೆದಿದ್ದಾರೆ.

ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ಸ್ವದೇಶಿ ಸರಣಿಯಲ್ಲಿ ಮಂಧಾನ 9 ಇನಿಂಗ್ಸ್‌ಗಳಲ್ಲಿ 5 ಅರ್ಧಶತಕಗಳ ಸಹಿತ 531 ರನ್ ಗಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News