ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್: ಉಡುಪಿಯ ಪೊಲೀಸ್ ಸಿಬ್ಬಂದಿ ಅಮಾನತು
Update: 2018-04-25 23:18 IST
ಉಡುಪಿ, ಎ.25: ಸಾಮಾಜಿಕ ಜಾಲತಾಣದಲ್ಲಿ ಪ್ರಕಟಗೊಂಡ ಫೋಸ್ಟ್‌ವೊಂದಕ್ಕೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಆರೋಪದಲ್ಲಿ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯೋರ್ವನನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬುಧವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಡಿಆರ್ ಪೊಲೀಸ್ ರಾಘವೇಂದ್ರ ಅಮಾನತುಗೊಂಡಿರುವ ಪೊಲೀಸ್ ಸಿಬ್ಬಂದಿ.
ಕಿಶೋರ್ ಕುಮಾರ್ ಶೆಟ್ಟಿ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಪೋಸ್ಟ್‌ವೊಂದನ್ನು ಹಾಕಿದ್ದರು. ಅದಕ್ಕೆ ಡಿಆರ್ ಪೊಲೀಸ್ ಸಿಬ್ಬಂದಿ ರಾಘವೇಂದ್ರ ಅವಹೇಳನಕಾರಿಯಾಗಿ ಕಮೆಂಟ್ ಮಾಡಿದ್ದರೆನ್ನಲಾಗಿದೆ. ಈ ಬಗ್ಗೆ ಕಿಶೋರ್ ಕುಮಾರ್ ಅವರ ಪತ್ನಿ ಮಮತಾ ಕೆ. ಶೆಟ್ಟಿ ಸೆನ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದರು.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ರಾಘವೆಂದ್ರ ಹಾಕಿರುವ ಕಮೆಂಟ್ ತಪ್ಪೆಂದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.