ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷರಾಗಿ ದೀಪಕ್ ಕುಮಾರ್ ಜೈನ್
Update: 2018-04-26 18:14 IST
ಬಂಟ್ವಾಳ, ಎ.26: ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷರಾಗಿ ದೀಪಕ್ ಕುಮಾರ್ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಪುಂಚಮೆ ಚಂದ್ರಶೇಖರ ರಾವ್, ಪ್ರಧಾನ ಕಾರ್ಯದರ್ಶಿಯಾಗಿ ಆಶಾ ಪ್ರಸಾದ್ ರೈ, ಜೊತೆ ಕಾರ್ಯದರ್ಶಿಯಾಗಿ ವಿನೋದ್ ಎಸ್., ಕೋಶಾಧಿಕಾರಿಯಾಗಿ ಚಂದ್ರಶೇಖರ್ ಡಿ. ಬೈರಿಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರಕಟನೆ ತಿಳಿಸಿದೆ.