​ಬಿಜೆಪಿ ರೋಡ್ ಶೋ : ಮಡಿಕೇರಿಯಲ್ಲಿ ಮತಯಾಚಿಸಿದ ಶಾಸಕ ಅಪ್ಪಚ್ಚು ರಂಜನ್

Update: 2018-04-26 13:51 GMT

ಮಡಿಕೇರಿ,ಎ.26:ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಕಾವು ಹೆಚ್ಚಾಗುತ್ತಿದ್ದು, ಬಿಜೆಪಿ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು ಅಲ್ಲಲ್ಲಿ ರೋಡ್ ಶೋಗಳನ್ನು ಮಾಡಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

ನಗರದ ಮುಖ್ಯ ಬೀದಿ ಹಾಗೂ ಬಡಾವಣೆಗಳಲ್ಲಿ ರೋಡ್ ಶೋ ಮಾಡಿದ ಹಾಲಿ ಶಾಸಕ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ನಾಗರೀಕರಲ್ಲಿ ಮತಯಾಚಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ 5 ವರ್ಷಗಳ ಕಾಲ ದುರಾಡಳಿತ ನಡೆಸಿದೆ ಎಂದು ಆರೋಪಿಸಿದ ಅವರು ಈ ಬಾರಿ ಬಿಜೆಪಿಗೆ ಅಧಿಕಾರ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತೆರೆದ ವಾಹನ ಹಾಗೂ ಆಟೋರಿಕ್ಷಾಗಳಲ್ಲಿ ಸಂಚರಿಸಿ ಮತಯಾಚಿಸುವ ಮೂಲಕ ಅಪ್ಪಚ್ಚುರಂಜನ್ ಮತದಾರರ ಗಮನ ಸೆಳೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News