ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ನಾಮಪತ್ರ ಸಿಂಧು

Update: 2018-04-26 14:43 GMT

ಬೆಂಗಳೂರು, ಎ. 26: ನೈಸ್ ಸಂಸ್ಥೆ ಮುಖ್ಯಸ್ಥ ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ನಾಮಪತ್ರವನ್ನು ಸಿಂಧುವಾಗಿದ್ದು, ಅವರ ಸ್ಪರ್ಧೆಗೆ ಎದುರಾಗಿದ್ದ ಆತಂಕ ನಿವಾರಣೆಯಾಗಿದೆ.

ಖೇಣಿ ಅಮೆರಿಕದ ಪೌರತ್ವ ಹೊಂದಿದ್ದು, ಬೇರೆ ದೇಶಗಳಲ್ಲಿ ಹಣಕಾಸಿನ ವ್ಯವಹಾರ ನಡೆಸಿದ್ದು, ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಸರಕಾರದ ಕಾಮಗಾರಿಗಳಲ್ಲಿ ಪಾಲನ್ನು ಹೊಂದಿದ್ದಾರೆ’ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ದೂರು ಸಲ್ಲಿಸಿದ್ದರು.

ಈ ಪ್ರಕರಣ ಸಂಬಂಧ ಖೇಣಿ ಪರ ವಕೀಲ ಗುರುವಾರ ಬೆಳಗ್ಗೆ 11ಗಂಟೆಗೆ ಖೇಣಿಯವರ ಪಾಸ್‌ಪೋರ್ಟ್ ಮತ್ತು ಆದಾಯ ತೆರಿಗೆ ಇಲಾಖೆಗೆ ಪಾವತಿಸಿರುವ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದರು. ಆ ದಾಖಲೆಗಳನ್ನು ಪರಿಶೀಲಿಸಿದ ಅಧಿಕಾರಿಗಳು, ಮತದಾರರ ಪಟ್ಟಿಯ ಅಕ್ರಮ ನೋಂದಣಿ ವಿಚಾರಣೆ ನಮ್ಮ ಪರಿಧಿಯಲ್ಲಿ ಬರುವುದಿಲ್ಲ.

ಈ ಕುರಿತು ಕೇಂದ್ರ ಗೃಹ ಇಲಾಖೆಯ ಸಕ್ಷಮ ಪ್ರಾಧಿಕಾರದಲ್ಲಿ ದೂರನ್ನು ಸಲ್ಲಿಸಬಹುದು. ಸರಕಾರದ ಕಾಮಗಾರಿಗಳಲ್ಲಿ ನೈಸ್ ಕಂಪೆನಿ ಒಪ್ಪಂದ ಮಾಡಿಕೊಂಡಿದೆಯೇ ವಿನಃ ಅಶೋಕ್ ಖೇಣಿ ಹೆಸರಿನಲ್ಲಿ ಆಗಿಲ್ಲ ಎಂದು 2013ರಲ್ಲೇ ನ್ಯಾಯಾಲಯ ದೂರು ಅರ್ಜಿ ವಜಾ ಮಾಡಿದೆ ಎಂದು ತಿಳಿಸಿದ್ದರಿಂದ ಅವರ ನಾಮಪತ್ರ ಅಂಗೀಕರಿಸಲಾಗಿದೆ ಎಂದು ಎಂದು ಚುನಾವಣಾಧಿಕಾರಿಗಳು ಪ್ರಕಟಿಸಿದ್ದಾರೆ.

ನ್ಯಾಯಾಲಯದಲ್ಲಿ ದೂರು: ಅರ್ಜಿಯಲ್ಲಿರುವ ಆಕ್ಷೇಪಣೆಗಳ ವಿಚಾರ ಚುನಾವಣಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಆಯೋಗ ತಿಳಿಸಿದೆ. ಹೀಗಾಗಿ ನ್ಯಾಯಾಲಯದಲ್ಲಿ ದೂರು ಸಲ್ಲಿಸುತ್ತೇನೆ ಎಂದು ಟಿ.ಜೆ.ಅಬ್ರಹಾಂ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News