ಸಂಸದ ನಳಿನ್‌ ಕುಮಾರ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Update: 2018-04-26 15:25 GMT

ಬೆಂಗಳೂರು, ಎ.26: ಸಂಸದ ನಳಿನ್ ಕುಮಾರ್ ಅವರು 2014ರಲ್ಲಿ ಲೋಕಸಭಾ ಚುನಾವಣೆ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.ಆರೋಪಗಳಲ್ಲಿ ಹುರುಳಿಲ್ಲ ಹಾಗೂ ಇವುಗಳನ್ನು ಪುಷ್ಟೀಕರಿಸುವ ಸಾಕ್ಷಗಳಿಲ್ಲ ಎಂಬ ಕಾರಣಕ್ಕೆ ಪ್ರಕರಣ ರದ್ದುಗೊಳಿಸಲಾಗಿದೆ.

ವಿಚಾರಣೆ ತಡೆ: ಧಾರ್ಮಿಕ ಸೌಹಾದರ್ತೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ವಿರುದ್ಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಮುಂದಿನ ವಿಚಾರಣೆಗೆ ತಡೆ ನೀಡಲಾಗಿದೆ.

ರಾಜಶೇಖರಾನಂದ ಸ್ವಾಮೀಜಿ ಪ್ರಕರಣ: 144ನೇ ನಿಷೇಧಾಜ್ಞೆ ಉಲ್ಲಂಘಿಸಿ ಸುಮಾರು ಎರಡು ಸಾವಿರ ಜನರ ಜೊತೆ ಮೆರವಣಿಗೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

2014ರ ಡಿಸೆಂಬರ್ 9 ರಂದು ಮಂಗಳೂರು ಹೊರವಲಯದ ಉಳಾಯಿಬೆಟ್ಟುವಿನಲ್ಲಿ ದತ್ತ ಮಾಲಾಧಾರಿಗಳ ಮೇಲಿನ ಹಲ್ಲೆ ಖಂಡಿಸಿ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು.

ಮೂರೂ ಪ್ರಕರಣಗಳನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಪ್ರಕರಣದಲ್ಲಿ ಅರ್ಜಿದಾರರ ಪರ ವಕೀಲ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News