ದಾಖಲೆರಹಿತ ಹಣ ಸಾಗಾಟ: ಎಂಇಪಿ ಅಧ್ಯಕ್ಷೆ ನೌಹೇರಾ ಶೇಖ್ ವಿರುದ್ಧ ಪ್ರಕರಣ ದಾಖಲು

Update: 2018-04-27 12:19 GMT

ಬೆಂಗಳೂರು, ಎ.27: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಸ್ಪರ್ಧಿಸುತ್ತಿರುವ ನೂತನ ಪಕ್ಷವಾದ ಮಹಿಳಾ ಎಂಪವರ್ ಮೆಂಟ್ ಪಾರ್ಟಿ (ಎಂಇಪಿ) ಗೆ ತೀವ್ರ ಮುಜುಗರ ತರಿಸುವಂತಹ ಘಟನೆಯೊಂದು ನಡೆದ ಬಗ್ಗೆ ವರದಿಯಾಗಿದೆ. ಇಲ್ಲಿನ ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ದಾಖಲೆರಹಿತ 3.94 ಲಕ್ಷ ರೂ. ಸಾಗಿಸುತ್ತಿದ್ದ ಎಂಇಪಿ ರಾಷ್ಟ್ರೀಯ ಅಧ್ಯಕ್ಷೆ ನೌಹೇರಾ ಶೇಖ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

ತಿರುಪತಿಯಿಂದ ಖಾಸಗಿ ಹೆಲಿಕಾಪ್ಟರ್ ನಲ್ಲಿ ಬಂದಿಳಿದ ನೌಹೇರಾ ಶೇಖ್ ರನ್ನು ತಪಾಸಣೆ ನಡೆಸಿದಾಗ 3.94 ಲಕ್ಷ ರೂ. ಅವರ ಬ್ಯಾಗ್ ನಲ್ಲಿ ಪತ್ತೆಯಾಗಿತ್ತು. ಹಣದ ಮೂಲ ಯಾವುದು ಎನ್ನುವ ಬಗ್ಗೆ ಮಾಹಿತಿ ನೀಡಲು ನೌಹೇರಾ ನಿರಾಕರಿಸಿದರು ಎಂದು ಎಚ್ ಎಎಲ್ ಉಪವಿಭಾಗದ ಸಹಾಯಕ ನೋಡಲ್ ಅಧಿಕಾರಿ ಕುಶಾಲಪ್ಪ ಹೇಳಿದ್ದಾರೆ.

ಅಧಿಕಾರಿಗಳು ಈ ಹಣವನ್ನು ವಶಪಡಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಕರ್ನಾಟಕ ಪೊಲೀಸ್ ಕಾಯ್ದೆ ಸೆಕ್ಷನ್ 98ರಡಿಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News