ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಜೈಲು
Update: 2018-04-27 18:58 IST
ಬೆಂಗಳೂರು, ಎ.27: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪ ಪ್ರಕರಣ ಸಂಬಂಧ ನ್ಯಾಯಾಲಯ ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ನಗರದ ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರ ಮೇ 3ರಂದು 12 ರ್ಷದ ಅಪ್ರಾಪ್ತ ಬಾಲಕಿ ಮೇಲೆ ಶಕ್ತಿವೇಲು ಎಂಬಾತ ಅತ್ಯಾಚಾರವೆಸಗಿದ್ದ ಎಂದು ಆರೋಪಿಸಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಬಳಿಕ ಪ್ರಕರಣ ಸಂಬಂಧ ಎಸ್ಸೈ ಆರ್.ಪಿ.ಅನಿಲ್ ಎಂಬುವರು ಆರೋಪಿ ಶಕ್ತಿವೇಲುನನ್ನು ದಸ್ತಗಿರಿ ಮಾಡಿ, ತನಿಖೆಯನ್ನು ಪೂರ್ಣಗೊಳಿಸಿ ಆರೋಪಿಯ ಮೇಲೆ ನಗರದ 55 ನೆ ಸಿಸಿಎಚ್ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ಸರಕಾರಿ ಅಭಿಯೋಜಕರಾಗಿ ರೇಮಣಿ ಅಭಿಯೋಗ ಪರವಾಗಿ ವಾದ ಮಂಡಿಸಿದ್ದರು. ವಾದವನ್ನು ಆಲಿಸಿದ ನ್ಯಾಯಾಲಯ ವಿಚಾರಣೆ ನಡೆಸಿ ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 2,500 ರೂ. ದಂಡ ವಿಧಿಸಿ ಆದೇಶಿಸಿದೆ ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.