ಬೆಂಗಳೂರು: ಕಾರ್ಮಿಕರ ದಿನಾಚರಣೆ ಅಂಗವಾಗಿ ಬೃಹತ್ ಮೆರವಣಿಗೆ
ಬೆಂಗಳೂರು, ಎ.27: ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಜಿಲ್ಲಾ ಮಂಡಳಿ ವತಿಯಿಂದ ಕಾರ್ಮಿಕರ ದಿನಾಚರಣೆ ಅಂಗವಾಗಿ ಮೇ 1 ರಂದು ನಗರದ ಆನಂದ್‌ರಾವ್ ವೃತ್ತದಲ್ಲಿರುವ ರೇಣುಕಾಚಾರ್ಯ ಕಾನೂನು ಕಾಲೇಜುವರೆಗೂ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ನಗರದ ವಿವಿಧ ಪ್ರದೇಶಗಳಿಂದ ನೂರಾರು ಸಂಖ್ಯೆಯಲ್ಲಿ ಕಾರ್ಮಿಕರು ಮೆರವಣಿಗೆ ನಡೆಸಲಿದ್ದು, ಕಾಲೇಜಿನಲ್ಲಿರುವ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದ್ದಾರೆ. ಅನಂತರ ನಡೆಯಲಿರುವ ಸಭೆಯಲ್ಲಿ ಎಐಟಿಯುಸಿ ಅಧ್ಯಕ್ಷ ಅನಂತ್‌ಸುಬ್ಬಾರಾವ್, ಡಾ.ಸಿದ್ದನಗೌಡ ಪಾಟೀಲ್, ಮಹಿಳಾ ಒಕ್ಕೂಟದ ಎ.ಜ್ಯೋತಿ ಸೇರಿದಂತೆ ಹಲವರು ಕಾರ್ಮಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಈ ಸಮಾವೇಶದಲ್ಲಿ ಕಾರ್ಮಿಕರಿಗೆ ಕನಿಷ್ಟ ವೇತನ 18 ಸಾವಿರ ವೇತನ ನೀಡಬೇಕು. ಕಾರ್ಮಿಕರ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆಗಳಿಗೆ ಕಡಿವಾಣ ಹಾಕಬೇಕು. ಕಾರ್ಮಿಕರ ಪರವಾದ ಕಾನೂನುಗಳನ್ನು ಜಾರಿ ಮಾಡಬೇಕು ಸೇರಿದಂತೆ ಕಾರ್ಮಿಕ ವರ್ಗಕ್ಕೆ ಸಂಬಂಧಿಸಿದ ಹಲವು ನಿರ್ಣಯಗಳನ್ನು ಅಂಗೀಕರಿಸಲಾಗುತ್ತದೆ. ಅಲ್ಲದೆ, ಪರಮಾಣು ಶಸ್ತ್ರಾಸ್ತ್ರಗಳ ಮತ್ತು ಅದರ ಭೀತಿಗಳ ಕುರಿತು ಜಾನ್ ದೇವರಾಜ ನಿರ್ದೇಶಿಸಿರುವ ಕಿರುಚಿತ್ರ don't let the fire die ವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.