×
Ad

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಮುಷ್ಕರದಿಂದ ಹಿಂದೆ ಸರಿದ ಬಿಎಂಆರ್‌ಸಿಎಲ್ ನೌಕರರ ಸಂಘ

Update: 2018-04-27 21:30 IST

 ಬೆಂಗಳೂರು, ಎ.27: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎ.28ರಂದು ಕರೆ ನೀಡಿದ್ದ ಮುಷ್ಕರದಿಂದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೌಕರರ ಸಂಘ ಹಿಂದೆ ಸರಿದಿದೆ.

ಬಿಎಂಆರ್‌ಸಿಎಲ್ ನೌಕರರ ಸಂಘ ಕರೆ ನೀಡಿದ್ದ ಮುಷ್ಕರ ತಡೆ ಹಿಡಿಯುವಂತೆ ಕೋರಿ ಮೆಟ್ರೋ ರೈಲು ನಿಗಮ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಅವರಿದ್ದ ಪೀಠ, ಪ್ರಕರಣದ ಸಂಬಂಧ ಮೇ 28ರ ವರೆಗೆ ಮತ್ತೆ ಒಂದು ತಿಂಗಳ ಕಾಲ ಸಭೆ ನಡೆಸಿ ಸಮಸ್ಯೆ ಬಗೆ ಹರಿಸಿಕೊಳ್ಳುವಂತೆ ಬಿಎಂಆರ್‌ಸಿಎಲ್ ಹಾಗೂ ನೌಕರರ ಸಂಘಕ್ಕೆ ಸಲಹೆ ನೀಡಿತು. ಇದೇ ವೇಳೆ ನ್ಯಾಯಾಲಯದ ಗಮನಕ್ಕೆ ತರದೇ ಯಾವುದೇ ಮುಷ್ಕರಕ್ಕೆ ಕರೆ ನೀಡದಂತೆ ಬಿಎಂಆರ್‌ಸಿಎಲ್ ನೌಕರರ ಸಂಘಕ್ಕೆ ಸೂಚಿಸಿ ವಿಚಾರಣೆ ಮುಂದೂಡಿತು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ಮುಷ್ಕರ ನಡೆಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತೊಮ್ಮೆ ಸಭೆ ನಡೆಸಿ ಸಮಸ್ಯೆ ಬಗೆ ಹರಿಸಿಕೊಳ್ಳುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರಕ್ಕೆ ಬರುವಂತೆ ಸೂಚಿಸಿತು. ಇದಕ್ಕೊಪ್ಪಿದ ನೌಕರರ ಸಂಘ ಶನಿವಾರ ಕರೆ ನೀಡಿದ್ದ ಮುಷ್ಕರದಿಂದ ಹಿಂದೆ ಸರಿಯುವುದಾಗಿ ಕೋರ್ಟ್‌ಗೆ ಭರವಸೆ ನೀಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News