ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ 7 ಮಕ್ಕಳನ್ನು ಚೂರಿಯಿಂದ ಇರಿದು ಹತ್ಯೆಗೈದ ವ್ಯಕ್ತಿ

Update: 2018-04-27 16:53 GMT

ಬೀಜಿಂಗ್, ಎ.27: ಮನೆಗೆ ಹಿಂದಿರುಗುತ್ತಿದ್ದ ಮಕ್ಕಳ ಮೇಲೆ ಚೂರಿಯಿಂದ ದಾಳಿ ನಡೆಸಿದ ವ್ಯಕ್ತಿಯೋರ್ವ 7 ಮಕ್ಕಳನ್ನು ಕೊಂದ ಘಟನೆ ಉತ್ತರ ಚೀನಾದಲ್ಲಿ ಶುಕ್ರವಾರ ನಡೆದಿದೆ. ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ನಡೆದ ಬರ್ಬರ ಕೃತ್ಯ ಇದಾಗಿದೆ.

ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಗಾಯಾಳು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸರಕಾರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂಜೆಯ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತಪಟ್ಟ ಮಕ್ಕಳು 12ರಿಂದ 15 ವಯಸ್ಸಿನ ಒಳಗಿನವರು ಎನ್ನಲಾಗಿದೆ. ಇದಕ್ಕೂ ಮೊದಲು ಫೆಬ್ರವರಿಯಲ್ಲಿ ಶಾಪಿಂಗ್ ಮಾಲ್ ವೊಂದರಲ್ಲಿ ಚೂರಿಯೊಂದಿಗೆ ಆಗಮಿಸಿದ್ದ ವ್ಯಕ್ತಿಯೊಬ್ಬ ಮಹಿಳೆಯೋರ್ವರನ್ನು ಇರಿದು ಕೊಂದಿದ್ದ. ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News