×
Ad

ಉಳ್ಳಾಲದಲ್ಲಿ ಜೆಡಿಎಸ್ ಪರ ಪ್ರಚಾರಕ್ಕೆ ದೇವೇಗೌಡ, ಉವೈಸಿ, ಮಾಯಾವತಿ ಆಗಮನ: ಮುಹಮ್ಮದ್ ಕುಂಞಿ

Update: 2018-04-27 22:28 IST

ಉಳ್ಳಾಲ, ಎ.27: ಮಂಗಳೂರು(ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ಜಾತ್ಯಾತೀತ ಜನತಾದಳದ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಂಸದ ಉವೈಸಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಸೇರಿದಂತೆ ವಿವಿಧ ನಾಯಕರು ಶೀಘ್ರದಲ್ಲೇ ಆಗಮಿಸಲಿದ್ದಾರೆ ಎಂದು ಜಾತ್ಯಾತೀತ ಜನತಾದಳದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ ವಿಟ್ಲ ತಿಳಿಸಿದ್ದಾರೆ.

ಉಳ್ಳಾಲ ಮಾಸ್ತಿಕಟ್ಟೆಯ ಚುನಾವಣಾ ಕಚೇರಿಯಲ್ಲಿ ಶುಕ್ರವಾರ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ತೊಕ್ಕೊಟ್ಟು ಉಳ್ಳಾಲ, ದೇರಳಕಟ್ಟೆ, ಮುಡಿಪು ಭಾಗಗಳಲ್ಲಿ ನಡೆಯುವ ಬಹಿರಂಗ ಸಮಾವೇಶಗಳಲ್ಲಿ ರಾಜ್ಯ ಹಾಗೂ ರಾಷ್ಟ್ರ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭ ಜೆಡಿಎಸ್ ಮಂಗಳೂರು ಕ್ಷೇತ್ರ ಅಧ್ಯಕ್ಷ ಮೋಹನದಾಸ ಶೆಟ್ಟಿ, ಮುಖಂಡರಾದ ಅಝೀಝ್ ಮಲಾರ್, ಅಕ್ಸಾ ಉಸ್ಮಾನ್, ಝಾಕಿರ್ ಉಳ್ಳಾಲ್, ನಾಸಿರ್, ಎಚ್. ಸಾಲಿ , ನಝೀರ್ ಉಳ್ಳಾಲ್, ವಿದ್ಯಾರ್ಥಿ ಜನತಾದಳದ ಸಿನಾನ್, ದಿನಕರ್ ಉಳ್ಳಾಲ್, ಫಾರುಕ್ ಯು.ಎಚ್ ಉಪಸ್ಥಿತರಿದ್ದರು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News