×
Ad

ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ: ಗುರ್ಮೆ ಸುರೇಶ್ ಶೆಟ್ಟಿ

Update: 2018-04-27 22:37 IST

ಶಿರ್ವ, ಎ.27: ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಮತ್ತು ಅಭಿವೃದ್ಧಿಯ ಅನುಷ್ಠಾನ ರಾಜ್ಯದ ಜನತೆಗೆ ತಲುಪಬೇಕಾದರೆ ಕರ್ನಾಟಕದಲ್ಲೂ ಯಡಿಯೂರಪ್ಪನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬರಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಾಲಾಜಿ ಮೆಂಡನ್‌ರನ್ನು ಬಹುಮತದಿಂದ ಗೆಲ್ಲಿಸಬೇಕೆಂದು ಉಡುಪಿ ಜಿಲ್ಲಾ ಬಿಜೆಪಿ ಹಿರಿಯ ನಾಯಕ ಗುರ್ಮೆ ಸುರೇಶ್ ಶೆಟ್ಟಿ ಮನವಿ ಮಾಡಿದ್ದಾರೆ.

ಶಿರ್ವ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ರಾಜಕೀಯ ಪಾರ್ಟಿಯಲ್ಲಿ ಅಪೇಕ್ಷೆಗಳಿರುವುದು ತಪ್ಪಲ್ಲ, ಆದರೆ ಪಾರ್ಟಿ ಒಬ್ಬರನ್ನು ಅಭ್ಯರ್ಥಿಯೆಂದು ಘೋಷಿಸಿದ ನಂತರ ಒಮ್ಮತದ ಹೋರಾಟ ಅನಿವಾರ್ಯ ಎಂದು ಗುರ್ಮೆ ಹೇಳಿದರು.

ಬಿಜೆಪಿ ಅಭ್ಯರ್ಥಿ ಲಾಲಾಜಿ ಮೆಂಡನ್ ಪಾರ್ಟಿ ಕೊಟ್ಟ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕಾಪು ಕ್ಷೇತ್ರದ ಪೂರ್ಣಾಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.

ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಬಿಜೆಪಿ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ, ಕಾಪು ಕ್ಷೇತ್ರದ ಬಿಜೆಪಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಶಕ್ತಿ ಕೇಂದ್ರದ ಅದ್ಯಕ್ಷ ರಾಜೇಶ್ ನಾಯ್ಕಿ, ಸಂತೋಷ್ ಶೆಟ್ಟಿ, ಶಿರ್ವ ಪಂಚಾಯತ್ ಅಧ್ಯಕ್ಷೆ ವಾರಿಜಾ ಮುಂತಾದವರು ಉಪಸ್ಥಿತರಿದ್ದರು   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News