ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ: 8 ಲಕ್ಷ ರೂ.ದಂಡ ವಸೂಲಿ
Update: 2018-04-27 23:09 IST
ಬೆಂಗಳೂರು, ಎ. 27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ 6566 ಮಂದಿ ಟಿಕೆಟ್ ರಹಿತ ಪ್ರಯಾಣಿಕರಿಂದ ಒಟ್ಟು 8 ಲಕ್ಷ ರೂ.ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಮಾರ್ಚ್ ತಿಂಗಳಲ್ಲಿ ಸಂಸ್ಥೆಯ ತನಿಖಾ ತಂಡಗಳು 48 ಸಾವಿರ ವಾಹನಗಳನ್ನು ತಪಾಸಣೆ ನಡೆಸಿದ್ದು, ಟಿಕೆಟ್ ರಹಿತ ಪ್ರಯಾಣಿಕರಿಂದ 8,04,964 ರೂ.ದಂಡ ವಸೂಲಿ ಮಾಡಲಾಗಿದೆ. ಅಲ್ಲದೆ, ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ 1ಲಕ್ಷ ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.