ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

Update: 2018-04-27 18:16 GMT

ರಾಜ್ಯ ವಿಧಾನಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಶುಕ್ರವಾರ ಮಂಗಳೂರಿನ ಟಿಎಂಎ ಪೈ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರಿಗೆ ಹಸ್ತಾಂತರಿಸುವ ಮೂಲಕ ಬಿಡುಗಡೆಗೊಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಡಾ.ಜಿ.ಪರಮೇಶ್ವರ್ ಹಾಗೂ ಇತರ ಹಿರಿಯ ಮುಖಂಡರು ಉಪಸ್ಥಿತರಿದ್ದರು. ಬಳಿಕ ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದ ಮುಖ್ಯಮಂತ್ರಿ ಸಿದ್ದರಾಮಯ್ಯ, ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮೊದಲಾದವರು ಜೊತೆಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor