ಜೆಡಿಯುನಿಂದ ರಾಜ್ಯದ 31 ಕ್ಷೇತ್ರಗಳಲ್ಲಿ ಸ್ಪರ್ಧೆ

Update: 2018-04-28 13:03 GMT

ಬೆಂಗಳೂರು, ಎ.28: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಂಯುಕ್ತ ಜನತಾದಳದಿಂದ ರಾಜ್ಯದ 31 ವಿಧಾನಸಭಾ ಕ್ಷೇತ್ರಗಳಿಂದ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ ಎಂದು ಜೆಡಿಯು ವಕ್ತಾರ ಡಿ.ಬೇಹಳ್ಳಿ ನಾಗರಾಜ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಸೌರ್ಹಾದತೆಯ ಹೊಸ ಸಂಸ್ಕೃತಿಯನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಪ್ರಾಮಾಣಿಕ, ಪರಿಶುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಪ್ರಾಮಾಣಿಕ ವ್ಯವಸ್ಥೆಯ ಮೂಲಕ ಮೂಲ ಸೌಕರ್ಯ ಕಲ್ಪಿಸುವುದು ಹಾಗೂ ಸಮೃದ್ಧ ಸಮಾಜ ನಿರ್ಮಾಣ ಮಾಡುವುದು ನಮ್ಮ ಗುರಿ ಹಾಗೂ ರೈತರು, ಮಹಿಳಾ ಮತ್ತು ಯುವಸಮುದಾಯಕ್ಕೆ ಪ್ರೋತ್ಸಾಹ ನೀಡುವುದು ನಮ್ಮ ಉದ್ದೇಶವಾಗಿದೆ ಎಂದರು.

ಇತ್ತೀಚಿಗೆ ಎಲ್ಲ ರಾಜಕೀಯ ಪಕ್ಷಗಳು ಪರ-ವಿರೋಧ ವಾದಗಳಲ್ಲಿ ಕಾಲ ಕಳೆಯುತ್ತಿವೆ. ಜನರ ನೈಜ ಸಮಸ್ಯೆಗಳು, ಪರಿಹಾರಗಳು ಹಾಗೂ ರೈತ, ಕೃಷಿ-ಕೂಲಿ ಕಾರ್ಮಿಕರ ಸಂಕಷ್ಟಗಳು, ವಿದ್ಯಾರ್ಥಿ-ಯುವಜನರ ನೋವು-ನಲಿವುಗಳಿಗೆ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ, ರಾಜ್ಯಕ್ಕೆ ಪರ್ಯಾಯ ರಾಜಕಾರಣ ಅತ್ಯವಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News