ಸನ್‌ರೈಸರ್ಸ್ ಹೈದರಾಬಾದ್-ರಾಜಸ್ಥಾನ ಹಣಾಹಣಿ

Update: 2018-04-28 18:48 GMT

ಜೈಪುರ, ಎ.28: ರಾಜಸ್ಥಾನ ರಾಯಲ್ಸ್ ತಂಡ ರವಿವಾರ ನಡೆಯಲಿರುವ ಐಪಿಎಲ್ ಟ್ವೆಂಟಿ-20 ಟೂರ್ನಿಯ ಮೊದಲ ಪಂದ್ಯದಲ್ಲಿ ಸನ್ ರೈಸರ್ಸ್‌ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಉತ್ತಮಪಡಿಸಲು ನೋಡುತ್ತಿದೆ.

  ರಾಯಲ್ಸ್‌ಗೆ ಈ ಪಂದ್ಯ ಸವಾಲಿನಿಂದ ಕೂಡಿದೆ. ಯಾಕೆಂದರೆ ಎ.26ರಂದು ಬಲಿಷ್ಠ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸನ್‌ರೈಸರ್ಸ್‌ ತಂಡ 13 ರನ್‌ಗಳ ರೋಚಕ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿತ್ತು. ಈ ಕಾರಣದಿಂದಾಗಿ ಅದು ಮತ್ತೆ ಗೆಲುವಿನತ್ತ ನೋಡುತ್ತಿದೆ.

 ಸನ್‌ರೈಸರ್ಸ್‌ ತಂಡ ಆಡಿರುವ 7 ಪಂದ್ಯಗಳ ಪೈಕಿ 5ರಲ್ಲಿ ಜಯ ಗಳಿಸಿದೆ. ರಾಜಸ್ಥಾನ ರಾಯಲ್ಸ್ ತಂಡ 3 ಗೆಲುವು ಮತ್ತು 3 ಪಂದ್ಯಗಳಲ್ಲಿ ಸೋಲು ಅನುಭವಿಸಿ 5ನೇ ಸ್ಥಾನ ಪಡೆದಿದೆ. ರಾಜಸ್ಥಾನ ಸತತ ಸೋಲಿನೊಂದಿಗೆ ಕಂಗೆಟ್ಟಿದ್ದಾಗ ಆಲ್‌ರೌಂಡರ್ ಕೃಷ್ಣಪ್ಪ ಗೌತಮ್ ಅವರು ಮುಂಬೈ ಇಂಡಿಯನ್ಸ್ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿ 3 ವಿಕೆಟ್‌ಗಳ ಅಂತರದ ಗೆಲುವಿಗೆ ನೆರವಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News