ತುಮಕೂರು: ಮತದಾನ ಜಾಗೃತಿಗೆ ಸ್ವೀಪ್ ಕಮಿಟಿಯಿಂದ ಬೈಕ್ ರ‍್ಯಾಲಿ

Update: 2018-04-29 11:06 GMT

ತುಮಕೂರು,ಎ.29: ಜಿಲ್ಲಾ ಸ್ವೀಪ್ ಕಮಿಟಿ ವತಿಯಿಂದ ನಗರದ ಪ್ರದೇಶದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಭಾನುವಾರ ಬೆಳಗ್ಗೆ ಅಮಾನಿಕೆರೆಯ ಗಾಜಿನ ಮನೆಯಿಂದ ನಗರದ ವಿವಿಧ ಬಡಾವಣೆಗಳ ಮೂಲಕ ಮಹಾತ್ಮಗಾಂಧಿ ಕ್ರೀಡಾಂಗಣದವರೆಗೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.

ಅಮಾನಿಕೆರೆಯ ಗಾಜೀನಮನೆಯಲ್ಲಿ ಮತದಾನ ಜಾಗೃತಿ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾ ಗೋಪಿನಾಥ್, ಮತದಾನ ಪ್ರಮಾಣವನ್ನು ಹೆಚ್ಚಿಸಬೇಕೆಂಬ ಸದುದ್ದೇಶದಿಂದ ಜಿ.ಪಂ.ಸಿಇಓ ಅನಿಸ್ ಅವರ ನೇತೃತ್ವದ ಸ್ವೀಪ್ ಕಮಿಟಿ ವ್ಯಾಪಕ ಪ್ರಚಾರವನ್ನು ನಡೆಸುತ್ತಿದೆ. ಇದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜನರು ಮೇ.12 ರಂದು ನಡೆಯುವ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕು. ಆ ಮೂಲಕ ದೇಶದ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವಂತೆ ಮನವಿ ಮಾಡಿದರು.

ಸ್ವೀಪ್ ಕಮಿಟಿ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಓ ಅನಿಸ್ ಕಣ್ಮಣಿ ಜಾಯ್ ಮಾತನಾಡಿ, ಕಳೆದ ಬಾರಿ ಚುನಾವಣೆಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಹೊಲಿಕೆ ಮಾಡಿದರೆ ನಗರ ಪ್ರದೇಶಗಳಲ್ಲಿ ಅತಿ ಕಡಿಮೆ ಮತದಾನವಾಗಿತ್ತು. ಇದನ್ನು ಮನಗಂಡ ಚುನಾವಣಾ ಆಯೋಗ ನಗರದ ಪ್ರದೇಶದಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ. ವಿವಿಧ ರೀತಿಯ ಕಾರ್ಯಕ್ರಮಗಳು, ರ್ಯಾಲಿಗಳ ಮೂಲಕ ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಇದು ಈ ಬಾರಿಯ ಮತದಾನದ ಪ್ರಮಾಣವನ್ನು ಹೆಚ್ಚಿಸಲಿದೆ ಎಂಬ ವಿಶ್ವಾಸವಿದೆ ಎಂದರು.

ಈ ವೇಳೆ ಸ್ವೀಪ್ ಕಮಿಟಿಯ ಇಚನೂರು ಇಸ್ಮಾಯಿಲ್, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಿ.ಮಂಜುನಾಥ್, ಕಬ್ಬಡಿ ತರಬೇತುದಾರ ಇಸ್ಮಾಯಿಲ್, ನಾಗೇಶ್‍ರಾವ್, ಡಿ.ರಾಜಶೇಖರ್ ಸೇರಿದಂತೆ ಹಲವರು ಜೊತೆಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News