×
Ad

ಕಾಂಗ್ರೆಸ್ ಅವಧಿಯಲ್ಲಿ ಮಹತ್ತರ ಪ್ರಗತಿ: ಮೊಯ್ದಿನ್ ಬಾವ

Update: 2018-04-29 20:03 IST

ಮಂಗಳೂರು, ಎ.29: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಐದು ವರ್ಷದಲ್ಲಿ ಕೈಗೊಂಡ ಕಾಮಗಾರಿಯನ್ನು ಪರಿಶೀಲಿಸಿದರೆ ಯಾರೂ ಸಾಧನೆ ಶೂನ್ಯ ಎನ್ನಲು ಸಾಧ್ಯವಿಲ್ಲ. ಮಾರುಕಟ್ಟೆ, ರಸ್ತೆ, ಹಕ್ಕು ಪತ್ರ ವಿತರಣೆ, ಒಳಚರಂಡಿ, ಆರ್‌ಟಿಒ ಕಚೇರಿ ಹೀಗೆ ಎಲ್ಲ ಕ್ಷೇತ್ರದಲ್ಲೂ ಸುಮಾರು 750 ಕೋ.ರೂ.ಗೂ ಅಧಿಕ ವೆಚ್ಚದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಹೇಳಿದರು.

ಅವರು ಸುರತ್ಕಲ್‌ನಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡುತ್ತಿದ್ದರು. ಕೆಲವು ಮಂದಿ ಸಾಧನೆಯ ಬಗ್ಗೆ ಅರಿವಿಲ್ಲದೆ ಅಪಪ್ರಚಾರ ನಡೆಸುತ್ತಿದ್ದಾರೆ. ಅಪಪ್ರಚಾರ ಮಾಡುವ ಮೊದಲು ಐದು ವರ್ಷದಲ್ಲಿ ಕೈಗೆತ್ತಿಕೊಂಡ ಕಾಮಗಾರಿ ಹಾಗೂ ಜನಯೋಜನೆಗಳ ಕುರಿತು ಮಾಹಿತಿ ಪಡೆದುಕೊಳ್ಳಲಿ ಎಂದ ಮೊಯ್ದಿನ್ ಬಾವಾ ಬಿಜೆಪಿ ಮತ್ತು ಕಾಂಗ್ರೆಸ್ ಸರಕಾರದ ಸಾಧನೆಯನ್ನು ಒಮ್ಮೆ ತುಲನೆ ಮಾಡಿ ನೋಡಿದಾಗ ಸತ್ಯ ಗೊತ್ತಾಗಲಿದೆ ಎಂದು ಮೊಯ್ದಿನ್ ಬಾವ ನುಡಿದರು.

ಜನರನ್ನು ತಪ್ಪುದಾರಿಗೆ ಎಳೆಯುವ ಕೆಲಸವನ್ನು ಯಾವುದೇ ಜನಪ್ರತಿನಿಧಿಯಾಗಲು ಬಯಸುವವ ಮಾಡಬಾರದು. ಮುಂದೆ ಇದೇ ರೀತಿಯ ಸುಳ್ಳುಗಳನ್ನು ಹೇಳಿ ಜನರನ್ನು ಹಾದಿ ತಪ್ಪಿಸುವುದು ಖಚಿತ ಎಂದ ಮೊಯ್ದಿನ್ ಬಾವಾ ಐದು ವರ್ಷದಲ್ಲಿ ಈ ಕ್ಷೇತ್ರದಲ್ಲಿ ಚಾಕು ಚೂರಿ ಸಂಸ್ಕೃತಿ ಕಡಿಮೆಯಾಗಿದೆ. ಹಿಂದಿನ ಅವಧಿಗೆ ಹೋಲಿಸಿದರೆ ಅಪರಾಧ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯ ಕಡತಗಳೇ ಸಾಕ್ಷಿ ಎಂದರು.
ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಹಂಗಾಮಿ ಅಧ್ಯಕ್ಷ ದೀಪಕ್ ಮತ್ತಿತರರು ಮಾತನಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News