×
Ad

ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶಕ್ಕೆ ​ಅರ್ಜಿ ಆಹ್ವಾನ

Update: 2018-04-29 20:11 IST

ಮಂಗಳೂರು, ಎ. 29: ದೇರಳಕಟ್ಟೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2018-19ನೇ ಸಾಲಿಗೆ ಆಂಗ್ಲ ಮಾಧ್ಯಮದ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 50 ಸೀಟುಗಳು ಲಭ್ಯವಿದ್ದು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ಬಾಲಕಿಯರಿಗೆ ಶೇ.75 ಹಾಗೂ ಇತರೆ ಸಮುದಾಯದ ಬಾಲಕಿಯರಿಗೆ ಶೇ. 25 ಸೀಟುಗಳನ್ನು ಮೀಸಲಿಡಲಾಗಿದೆ. ಅರ್ಜಿ ಸಲ್ಲಿಸಲು ಜೂ.1 ಕೊನೆಯ ದಿನವಾಗಿದೆ. ಮಾಹಿತಿಗೆ ಶಾಲೆಯ ಪ್ರಾಚಾರ್ಯರನ್ನು (ಮೊ.9449080150, 0824-2204712) ಸಂಪರ್ಕಿಸಬಹುದು.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಸತಿ ಶಾಲೆಯಲ್ಲ್ಲಿ ಎಸೆಸೆಲ್ಸಿವರೆಗೆ ಉಚಿತ ಶಿಕ್ಷಣ, ಉಚಿತ ಭೊಜನ, ಪಠ್ಯಪುಸ್ತಕ ಮತ್ತು ಲೇಖನ ಸಾಮಗ್ರಿ, ಹಾಸಿಗೆ, ಹೊದಿಕೆಗಳನ್ನು ಒದಗಿಸಲಾಗುವುದು. ಉತ್ತಮ ಗ್ರಂಥಾಲಯ ಹಾಗೂ ಪ್ರಯೋಗಾಲಯಗಳ ಸೌಲಭ್ಯವಿದೆ. ಪ್ರತಿ ತಿಂಗಳು ವಿದ್ಯಾರ್ಥಿಗಳಿಗೆ ಸೋಪ್, ಟೂತ್‌ಬ್ರಶ್, ಟೂತ್‌ಪೇಸ್ಟ್, ತೆಂಗಿನ ಎಣ್ಣೆ ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು. ಕಂಪ್ಯೂಟರ್ ಹಾಗೂ ಸ್ಮಾರ್ಟ್ ಕ್ಲಾಸ್ ತರಗತಿಗಳನ್ನು ನೀಡಲಾಗುವುದು. ನುರಿತ ಹಾಗೂ ಖಾಯಂ ಶಿಕ್ಷಕರಿಂದ ಬೋಧನೆ ನೀಡಲಾಗುವುದು. ಉಚಿತ ಸಮವಸ್ತ್ರ ಹಾಗೂ ಶೂಗಳನ್ನು ನೀಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News