ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಉಡುಪಿ, ಎ.29: ಉಡುಪಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಅಧ್ಯಯನ ಮಾಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶಾ ವಕಾಶ ಒದಗಿಸಲಾಗಿದ್ದು, ಈ ಬಗ್ಗೆ 2018-19ನೆ ಸಾಲಿನಲ್ಲಿ 5ನೇ ತರಗತಿ ಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ 6ನೆ ತರತಿ ಸೇರ್ಪಡೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಹಾಕುವ ವಿದ್ಯಾರ್ಥಿಗಳು 5 ನೇ ತರಗತಿಯಲ್ಲಿ ಶೇ.60 ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಪೋಷಕರ ವಾರ್ಷಿಕ ವರಮಾನ 2 ಲಕ್ಷ ರೂ. ಮೀರಿರಬಾರದು. ಪ್ರತಿಷ್ಠಿತ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಸತಿ, ಭೋಜನ ವೆಚ್ಚ, ಶಾಲೆಯ ಕಡ್ಡಾಯ ಶುಲ್ಕ, ಸಮವಸ್ತ್ರ, ಪಠ್ಯ ಪುಸ್ತಕ, ಪ್ರವಾಸ ಭತ್ಯೆ ಹಾಗೂ ಇತರ ಭತ್ಯೆಗಳನ್ನು ಇತರೆ ವಿದ್ಯಾರ್ಥಿಗಳಿಗೆ ನಿಗಧಿಪಡಿಸಿದ ದರದಂತೆ ಗರಿಷ್ಠ ಮೊತ್ತ ಇಲಾಖೆಯು ನಿಗಧಿಪಡಿಸಿದಂತೆ 50,000 ರೂ. ಶುಲ್ಕ ಹಾಗೂ ಇತರೆ ವೆಚ್ಚವನ್ನು ಭರಿಸಲಾಗುವುದು.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಎಸ್.ಆರ್.ಪಬ್ಲಿಕ್ ಸ್ಕೂಲ್‌ನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಯಾಗಿ ಆಯ್ಕೆ ಮಾಡಲಾಗಿದ್ದು, ಈ ಶಾಲೆಯಲ್ಲಿ ದಾಖಲಾತಿಗೆ ಅವಕಾಶವಿದೆ. ಮೇ 14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.
ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ದಿ ಯೋಜನೆ ಉಡುಪಿ ದೂ.ಸಂ.:0820-2574814, ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಉಡುಪಿ ದೂ.ಸಂ.:0820- 2574892, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಉಡುಪಿ 0820-2528884, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕುಂದಾಪುರ ದೂ.ಸಂ.:08254-234609, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಾರ್ಕಳ ದೂ.ಸಂ.: 08258-232133 ರವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.